ಜೂ.11 ರಂದು ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ
ಮಡಿಕೇರಿ ಜೂ.9 : ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಅತ್ಯುತ್ತಮ ವರದಿ ಪ್ರಶಸ್ತಿ ಪ್ರದಾನ ಸಮಾರಂಭ ಜೂ.11 ರಂದು ಪತ್ರಿಕಾ ಭವನದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 10.30ಕ್ಕೆ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ಮಹಾಸಭೆ ಪ್ರಾರಂಭವಾಗಲಿದೆ ಎಂದು ಪ್ರಧಾನ ಕಾರ್ಯದರ್ಶಿ ಕುಡೆಕಲ್ಲು ಸಂತೋಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಧ್ಯಾಹ್ನ 12.30 ಕ್ಕೆ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಘದ 10 ಸದಸ್ಯರಿಗೆ ಒಟ್ಟು 15 ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಡವ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಬಿದ್ದಾಟಂಡ ಎಸ್. ತಮ್ಮಯ್ಯ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್‌ಸಾಗರ್, ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಕದ್ದಣಿಯಂಡ ಹರೀಶ್ ಬೋಪಣ್ಣ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಪಾಲ್ಗೊಳ್ಳಲಿದ್ದಾರೆ.
ಎಚ್.ಟಿ. ಅನಿಲ್, ಕಾಯಪಂಡ ಶಶಿ ಸೋಮಯ್ಯ, ಕೆ.ಬಿ. ಮಂಜುನಾಥ್, ಅಲ್ಲಾರಂಡ ವಿಠಲ ನಂಜಪ್ಪ, ವಿಘ್ನೇಶ್ ಭೂತನಕಾಡು, ನವೀನ್ ಸುವರ್ಣ, ಹಿರಿಕರ ರವಿ, ಎಂ.ಎನ್. ಚಂದ್ರ ಮೋಹನ್, ಎಚ್.ಕೆ. ಜಗದೀಶ್, ಎಚ್.ಜೆ. ರಾಕೇಶ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.





