ರೈತ ಆತ್ಮಹತ್ಯೆ

ಮದ್ದೂರು, ಜೂ.9: ಆಬಲವಾಡಿ ರೈತನೊಬ್ಬ ಸಾಲಬಾಧೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.
ಕೃಷ್ಣೇಗೌಡ (45) ಜಮೀನಿನ ಬಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ನಾಲ್ಕುದಿನಗಳ ಹಿಂದೆ ಇದೇ ಗ್ರಾಮದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು.
ಕೃಷ್ಣೇಗೌಡ ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Next Story





