'ಜಮೀಯ್ಯತುಲ್ ಫಲಾಹ್' ದಿಂದ ಇಫ್ತಾರ್ ಕೂಟ

ಮಂಗಳೂರು, ಜೂ. 9: ಜಮೀಯ್ಯುತುಲ್ ಫಲಾಹ್ ಮಂಗಳೂರು ನಗರ ಘಟಕದ ವತಿಯಿಂದ ಕಂಕನಾಡಿಯ ಜಮೀಯ್ಯುತುಲ್ ಫಲಾಹ್ ಸಭಾಂಗಣದಲ್ಲಿ ಇಫ್ತಾರ್ ಕೂಟ ನಡೆಯಿತು.
ತೊಕ್ಕಟ್ಟು ಮಸ್ಜಿದುಲ್ ಹುದಾ ಜುಮಾ ಮಸೀದಿಯ ಖತೀಬ್ ಮುಹಮ್ಮದ್ ಕುಂಞಿ ಝಕಾತ್‌ನ ಸಾಮೂಹಿಕ ಸಂಗ್ರಹ ಮತ್ತು ವಿತರಣೆಯ ಮಹತ್ವದ ಬಗ್ಗೆ ವಿವರಿಸಿದರು.
ಜಮೀಯ್ಯುತುಲ್ ಫಲಾಹ್ ಮಂಗಳೂರು ನಗರ ಘಟಕದ ಕಾರ್ಯದರ್ಶಿ ಬಿ.ಎಸ್.ಮುಹಮ್ಮದ್ ಬಶೀರ್ ಸಂಸ್ಥೆಯ ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ನೀಡಿದರು.
ಜಮೀಯ್ಯತುಲ್ ಫಲಾಹ್ ದ.ಕ. ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್, ಮಂಗಳೂರು ನಗರ ಘಟಕದ ಅಧ್ಯಕ್ಷ ಅಬ್ದುಲ್ ಅಝೀಝ್, ರಿಯಾದ್ ಘಟಕದ ಕೋಶಾಧಿಕಾರಿ ಮುಹಮ್ಮದ್ ಹನೀಫ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಂಗಳೂರು ನಗರ ಘಟಕದ ಮುಹಮ್ಮದ್ ಹನೀಫ್ ಕಾರ್ಯಕ್ರಮ ನಿರೂಪಿಸಿದರು.
Next Story





