ಅಕ್ರಮ ಜಾನುವಾರು ಸಾಗಾಟ: ಆರೋಪಿಗಳ ಬಂಧನ
.jpg)
ಉಪ್ಪಿನಂಗಡಿ, ಜೂ. 9: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದರು ಎನ್ನಲಾದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೊಲೀಸರು, ಇಬ್ಬರನ್ನು ಬಂಧಿಸಿ, ಜಾನುವಾರುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಹಾಸನದ ಹೊಳೆನರಸೀಪುರದ ವಾಜೀದ್ ಪಾಷಾ ಹಾಗೂ ಸಂತೋಷ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಎಸ್‌ಐ ನಂದಕುಮಾರ್ ನೇತೃತ್ವದಲ್ಲಿ 34ನೇ ನೆಕ್ಕಿಲಾಡಿ ಜಂಕ್ಷನ್‌ನಲ್ಲಿ ವಾಹನ ತಪಾಸಣೆ ನಡೆಸಿದ ಪೊಲೀಸರು ಜಾನುವಾರು ಸಾಗಾಟ ಮಾಡುತ್ತಿರುವುದು ಪತ್ತೆ ಹಚ್ಚಿದ್ದಾರೆ.
ಇವರು ವಾಹನದಲ್ಲಿ ಮೂರು ಎಮ್ಮೆ, ಒಂದು ಕೋಣ, ಒಂದು ಹಸು ಹಾಗೂ ಒಂದು ಹೋರಿಯನ್ನು ಹೇರಿಕೊಂಡು ಹಾಸನದಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಸಹಿತ ಜಾನುವಾರು, ವಾಹನವನ್ನು ವಶಪಡಿಸಿಕೊಂಡ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Next Story





