Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಹಾಯಕ್ಕೆ ಮಾನವೀಯತೆಯ ಮನಸ್ಸು ಮುಖ್ಯ:...

ಸಹಾಯಕ್ಕೆ ಮಾನವೀಯತೆಯ ಮನಸ್ಸು ಮುಖ್ಯ: ಯು.ಟಿ.ಖಾದರ್

ಎಂಎಂವೈಸಿ ವತಿಯಿಂದ ಇಫ್ತಾರ್ ಕೂಟ

ವಾರ್ತಾಭಾರತಿವಾರ್ತಾಭಾರತಿ9 Jun 2017 9:43 PM IST
share
ಸಹಾಯಕ್ಕೆ ಮಾನವೀಯತೆಯ ಮನಸ್ಸು ಮುಖ್ಯ: ಯು.ಟಿ.ಖಾದರ್

ಬೆಂಗಳೂರು, ಜೂ.9: ಯಾರಿಗಾದರೂ ಸಹಾಯ ಮಾಡಲು ನಮಗೆ ಹಣಕ್ಕಿಂತ ಮಾನವೀಯತೆಯ ಮನಸ್ಸು ಮುಖ್ಯ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಇಂದಿಲ್ಲಿ ಹೇಳಿದರು.

ಶುಕ್ರವಾರ ನಗರದ ಕಬ್ಬನ್‌ಪೇಟೆಯ ಹಮೀದ್ ಶಾ ಆವರಣದಲ್ಲಿ ಮಂಗಳೂರು ಮುಸ್ಲಿಮ್ ಯೂತ್ ಕೌನ್ಸಿಲ್(ಬೆಂ) ವತಿಯಿಂದ ಪವಿತ್ರ ರಮಝಾನ್ ಮಾಸದ ಅಂಗವಾಗಿ ಏರ್ಪಡಿಸಿದ್ದ ಇಫ್ತಾರ್ ಔತಣ ಕೂಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇದೀಗ ನಾವು ಮೊಬೈಲ್‌ನ ಸೆಲ್ಫಿ ಕಾಲದಲ್ಲಿದ್ದು, ನಮ್ಮ ಚಿತ್ರಗಳನ್ನು ಮಾತ್ರ ತೆಗೆದುಕೊಳ್ಳುತ್ತೇವೆ ವಿನಃ ಮುಂದೆ ಯಾರು ಇದ್ದರೂ ಗಮನ ನೀಡುವುದಿಲ್ಲ. ಅದೇ ರೀತಿ, ಸಹಾಯಕ್ಕೂ ಯಾರು ಮುಂದಾಗುತ್ತಿಲ್ಲ ಎಂದ ಅವರು, ಒಂದು ರಸ್ತೆಬದಿ ಅಪಘಾತವಾದರೆ ಸಹಾಯಕ್ಕೆ ಬಾರದೆ ನೂರಾರು ಬಾರಿ ಆಲೋಚನೆ ಮಾಡುತ್ತೇವೆ. ಹೀಗಿರುವಾಗ, ಮಾನವೀಯತೆಯ ಮನಸ್ಸು ಬೇಕೆಂದು ನುಡಿದರು.

ಯಾವುದೇ ಸಮಸ್ಯೆಗಳು ಇರಲಿ ಅದನ್ನು ಸರಿಪಡಿಸಿಕೊಳ್ಳಲು ಯುವಕರು ಮುಂದಾಗಬೇಕು ವಿನಃ ಅದನ್ನು ಮತ್ತೊಷ್ಟು ದೊಡ್ಡದು ಮಾಡಿಕೊಳ್ಳುವುದು ಸರಿಯಲ್ಲ. ಅಲ್ಲದೆ, ಎಲ್ಲರಿಗೂ ದುಃಖ, ಕಷ್ಟಗಳಿವೆ. ಆದರೆ, ಎಂದಿಗೂ ಕಷ್ಟವೇ ಇರುವುದಿಲ್ಲ ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದ ಅವರು, ಎಂಎಂವೈಸಿ ಸದಸ್ಯರು ಸಮುದಾಯದ ಏಳಿಗೆಗಾಗಿ ಹಾಗೂ ಬಡ ಮುಸ್ಲಿಮರ ಸಹಾಯಕ್ಕೆ ಮುಂದಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಖಾದರ್ ಮುಚ್ಚುಗೆ ವ್ಯಕ್ತಪಡಿಸಿದರು.

ಇದಕ್ಕೂ ಮೊದಲು ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ, ಕಾಂಗ್ರೆಸ್ ಮುಖಂಡ ಜಿ.ಎ.ಬಾವ ಮಾತನಾಡಿ, ಮುಸ್ಲಿಮ್ ಸಮುದಾಯದ ಯುವಕರು ಶೈಕ್ಷಣಿಕವಾಗಿ ಮುಂದಾಗಬೇಕು. ಆಗ ಮಾತ್ರ ಸಮುದಾಯ ಅಭಿವೃದ್ಧಿ ಹೊಂದಲು ಸಾಧ್ಯ. ಅಲ್ಲದೆ, ಕೆಲ ಯುವಕರು ಸೇರಿ ಕಟ್ಟಿದ ಎಂಎಂವೈಸಿ ಇದೀಗ ಸಮಾಜಕ್ಕಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದು ಸಂತಸ ತಂದಿದ್ದು, ಸಂಘಟನೆಯ ಅಭಿವೃದ್ಧಿಗೆ ಸರಕಾರಗಳಿಂದಲೂ ನೆರವು ಪಡೆಯಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವೌಲಾನಾ ಹಾಶಿಮ್ ಬಾಲವಿ ತಂಙಳ್, ಅಬೂಬಕರ್ ಸಿದ್ದೀಕ್ ಹುದವಿ, ಅನಿವಾಸಿ ಉದ್ಯಮಿ ಯೂಸಫ್ ಅಲ್ ಫಲಾಹ್, ಎಂಎಂವೈಸಿ ಗೌರವಾಧ್ಯಕ್ಷ(ಗಲ್ಫ್ ವಿಂಗ್) ಮುಹಮ್ಮದ್ ಕುಕ್ಕುವಳ್ಳಿ, ಗೌರವಾಧ್ಯಕ್ಷ ಉಮರ್ ಹಾಜಿ, ರಾಜ್ಯ ಕಾರ್ಯದರ್ಶಿ ಕೆ.ಜುನೈದ್, ಸಂಸ್ಥಾಪಕ ಅಧ್ಯಕ್ಷ ಎಚ್.ಅಬೂಬಕರ್, ರಶೀದ್ ವಿಟ್ಲ ಸೇರಿ ಪ್ರಮುಖರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X