Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಮೊವಾಡಿ ಚಲೋ ಸಂಘಟಕರಿಗೆ ಮುಚ್ಚಳಿಕೆ...

​ಮೊವಾಡಿ ಚಲೋ ಸಂಘಟಕರಿಗೆ ಮುಚ್ಚಳಿಕೆ ಬರೆದುಕೊಡಲು ನೋಟೀಸು

ವಾರ್ತಾಭಾರತಿವಾರ್ತಾಭಾರತಿ9 Jun 2017 10:04 PM IST
share

 ಕುಂದಾಪುರ, ಜೂ.9: ಮೊವಾಡಿಯ ಕೊರಗ ಸಮುದಾಯದ ಮೇಲೆ ಸಂಘ ಪರಿವಾರದ ಬೆಂಬಲಿಗರು ನಡೆಸಿದ ದೌರ್ಜನ್ಯವನ್ನು ಖಂಡಿಸಿ, ತಮ್ಮ ಆಹಾರ-ಭೂಮಿಯ ಹಕ್ಕನ್ನು ಪ್ರತಿಪಾದಿಸಿ ಜೂ.12ರಂದು ನಡೆಸಲು ನಿರ್ಧರಿಸಿರುವ ‘ಮೊವಾಡಿ ಚಲೋ’ ಹೋರಾಟದ ಸಂಘಟಕರಿಗೆ ಮುಚ್ಚಳಿಕೆ ಬರೆದುಕೊಡುವಂತೆ ಕುಂದಾಪುರ ತಹಶೀಲ್ದಾರರು ನೋಟೀಸು ಜಾರಿ ಮಾಡಿದ್ದಾರೆ.

ದಲಿತ ಸಂಘಟನೆಗಳ ಒಕ್ಕೂಟ ಉಡುಪಿ, ದಲಿತ ದಮನಿತರ ಹೋರಾಟ ಸಮಿತಿ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಜೂ.12ರ ಮೊವಾಡಿ ಚಲೋಗೆ ಕರೆ ನೀಡಿವೆ. ಈ ರ್ಯಾಲಿಯಲ್ಲಿ ಹಾಗೂ ಬಹಿರಂಗ ಸಭೆಯಲ್ಲಿ ಪ್ರಚೋದನಾತ್ಮಕ ಭಾಷಣ ಮಾಡುವ ಸಾಧ್ಯತೆ ಇರುವುದರಿಂದ ಹಾಗೂ ಮುಂದಿನ ದಿನಗಳಲ್ಲಿ ರಮಝಾನ್ ಆಚರಣೆ ಮತ್ತು ವಿಧಾನಸಭಾ ಚುನಾವಣೆಗೆ ಇದರಿಂದ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಕಲಂ108 ಸಿಆರ್‌ಪಿಸಿಯಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮುಚ್ಚಳಿಕೆ ಬರೆದುಕೊಡುವಂತೆ ನೋಟೀಸಿನಲ್ಲಿ ತಿಳಿಸಲಾಗಿದೆ.


ಉಡುಪಿಯ ವಿಠಲ ತೊಟ್ಟಂ, ಕುಂದಾಪುರ ತಲ್ಲೂರಿನ ಉದಯಕುಮಾರ್ ತಲ್ಲೂರು, ಹೂಡೆಯ ಹುಸೇನ್ ಕೋಡಿಬೇಂಗ್ರೆ, ಮಚ್ಚಟ್ಟು ಗ್ರಾಮದ ಅನಂತ ಮಚ್ಚಟ್ಟು, ಕುಂದಾಪುರದ ಕೆ.ಎಸ್.ವಿಜಯ, ಮಣೂರಿನ ಶ್ಯಾಮಸುಂದರ್ ತೆಕ್ಕಟ್ಟೆ ಹಾಗೂ ಬ್ರಹ್ಮಾವರ ವಾರಂಬಳ್ಳಿಯ ಶ್ಯಾಮ್‌ರಾಜ್ ಬಿರ್ತಿ ಇವರಿಗೆ ಜೂ.9ರಂದು ಅಪರಾಹ್ನ ಮೂರು ಗಂಟೆಗೆ ಈ ಕಚೇರಿಗೆ ಹಾಜರಾಗಿ ಸೂಕ್ತ ಮುಚ್ಚಳಿಕೆಯನ್ನು ನೀಡುವಂತೆ ನೋಟೀಸಿನಲ್ಲಿ ತಿಳಿಸಲಾಗಿದೆ.

ಇವರಲ್ಲಿ ಒಂದಿಬ್ಬರು ಮಾತ್ರ ಮುಚ್ಚಳಿಕೆ ಬರೆದು ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸಂಘ ಪರಿವಾರ ಆಯೋಜಿಸುವ ಬಹುತೇಕ ಸಮಾವೇಶ ಗಳಲ್ಲಿ ಪ್ರಚೋದನಾತ್ಮಕ ಮಾತನಾಡಿ ಕೋಮುಗಲಭೆಗೆ ಪ್ರೇರಣೆಯಾದ ಸಂದರ್ಭದಲ್ಲೂ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿ ಕೊಳ್ಳದೇ ಇಲಾಖೆ, ಹಿಂಸೆಯನ್ನು ಖಂಡಿಸಿ ನಡೆಸುವ ನ್ಯಾಯಬದ್ಧ ಹಾಗೂ ಶಾಂತಿಯುತ ಹೋರಾಟಕ್ಕೆ ಮೊದಲೇ ಮುಚ್ಚಳಿಕೆ ಬರೆಸಿಕೊಳ್ಳುವ ಕ್ರಮಕ್ಕೆ ದಲಿತ ಸಂಘಟನೆಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X