ಪ್ರತಿ ವಾರ್ಡ್‌ನಲ್ಲೂ ಉದ್ಯಾನವನ: ಆರ್.ಅಶೋಕ್

ಬೆಂಗಳೂರು, ಜೂ.10: ನಗರದದಲ್ಲಿ ಉತ್ತಮ ಪರಿಸರವನ್ನು ನಿರ್ಮಿಸುವ ಮೂಲಕ ಜನತೆಗೆ ಉತ್ತಮ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿವಾರ್ಡ್‌ನಲ್ಲಿ ಉದ್ಯಾನವನ ನಿರ್ಮಾಣವಾಗಬೇಕಾದ ಅಗತ್ಯವಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ತಿಳಿಸಿದ್ದಾರೆ.
ಶನಿವಾರ ನಗರದ ಕರಿಸಂದ್ರ ವಾರ್ಡ್‌ನಲ್ಲಿ 65 ಲಕ್ಷ ರೂ.ಗಳ ವೆಚ್ಚದಲ್ಲಿ ನವೀಕೃತಗೊಂಡ ಉಮಾಮಹೇಶ್ವರಿ ದೇವಾಲಯ ಉದ್ಯಾನವನವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಬೆಂಗಳೂರು ನಗರದಲ್ಲಿ ಉದ್ಯಾನವನಗಳನ್ನು ಅಭಿವೃದ್ಧಿಗೊಳಿಸುವುದು ತೀರ ಅಗತ್ಯವಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಮುಂದಾಗಿರುವುದು ಅಭಿನಂದನೀಯ. ಮುಂದಿನ ದಿನಗಳಲ್ಲಿ ವಾರ್ಡ್ ಮಟ್ಟದಲ್ಲಿ ಉದ್ಯಾನವನಗಳು ನಿರ್ಮಾಣಮಾಡಿ ಜನತೆಗೆ ಉತ್ತಮ ವಾತಾವರಣವನ್ನು ನಿರ್ಮಿಸಿಕೊಡುವುದು ಜನಪ್ರತಿನಿಧಿಗಳ ಜವಾಬ್ದಾರಿಯೆಂದು ಅವರು ತಿಳಿಸಿದರು.
Next Story





