Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಪರಾಧ ಮುಕ್ತ ನಗರಕ್ಕೆ ಮುಖ್ಯಮಂತ್ರಿ...

ಅಪರಾಧ ಮುಕ್ತ ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ವಾರ್ತಾಭಾರತಿವಾರ್ತಾಭಾರತಿ10 Jun 2017 6:26 PM IST
share
ಅಪರಾಧ ಮುಕ್ತ ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಬೆಂಗಳೂರು, ಜೂ.10: ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ನಡೆಯುವ ಗೂಂಡಾ ಮತ್ತು ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸರು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದ್ದಾರೆ.

ಶನಿವಾರ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬೆಂಗಳೂರು ನಗರ ಪೊಲೀಸರಿಂದ ನಾಗರಿಕ ಸಬಲೀಕರಣ ಉಪಕ್ರಮ ತುರ್ತು ಸಮಯದಲ್ಲಿ ಪ್ರತಿಕ್ರಿಯಿಸುವ ಸೇವೆ ನಮ್ಮ 100 ಸಹಾಯವಾಣಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಗರ ವ್ಯಾಪ್ತಿಯ ಸಮಸ್ಯೆಗಳನ್ನು ನಿವಾರಿಸಿ ಗುಣಾತ್ಮಕ ಬದಲಾವಣೆಗಳನ್ನು ತರಬೇಕೆಂಬ ಉದ್ದೇಶದಿಂದ ‘ನಿಮ್ಮ ದೂರು ನಮ್ಮ 100’ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಆಧುನಿಕ ಜಗತ್ತಿನಲ್ಲಿ ಹೊಸ ತಂತ್ರಜ್ಞಾನಗಳ ಬೆಳವಣಿಗೆಯಾಗುತ್ತಿದ್ದು, ನಮ್ಮ ರಾಜ್ಯಗಳಲ್ಲೂ ತಂತ್ರಜ್ಞಾನ ಅಭಿವೃದ್ದಿಯಾಗಬೇಕು ಎಂದ ಅವರು, ತುರ್ತು ಸಂದರ್ಭಗಳಲ್ಲಿ 100ಕ್ಕೆ ಕರೆ ಮಾಡಿ, ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರೆ ನಗರ ಪೊಲೀಸರು ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಾರೆ ಎಂದು ಮಾಹಿತಿ ನೀಡಿದರು.

ಪ್ರಕರಣ ನಡೆದ ತಕ್ಷಣ ತೊಂದರೆಯಲ್ಲಿದ್ದವರಿಗೆ ಸಹಾಯ ಮಾಡಲು ಈಗಾಗಲೇ ಹೊಯ್ಸಳ, ಪಿಂಕ್ ಹೊಯ್ಸಳ, ಸುರಕ್ಷಾ ಆಪ್ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪೊಲೀಸರು ಸಾರ್ವಜನಿಕರೊಂದಿಗೆ ಸದಾ ಸಂಪರ್ಕದಲ್ಲಿರಬೇಕು, ನಗರದಲ್ಲಿ 1.10 ಕೋಟಿ ಜನ ವಾಸ ಮಾಡುತ್ತಿದ್ದು, ಬೆಂಗಳೂರು ವೇಗವಾಗಿ ಬೆಳವಣಿಗೆಯಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿರುವ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಇಂತಹ ಸಹಾಯವಾಣಿಯನ್ನು ಆರಂಭಿಸಿ ಇದರ ಉದ್ದೇಶಿತ ಗುರಿ ಸಫಲವಾಗುವಂತೆ ಮಾಡಬೇಕು. ಪೊಲೀಸ್ ಇಲಾಖೆಯನ್ನು ಬಲಪಡಿಸಲು ಬೇಕಾದ ಎಲ್ಲಾ ಸೌಕರ್ಯಗಳನ್ನು ಸರಕಾರ ಒದಗಿಸುತ್ತಿದ್ದು, ಪೊಲೀಸರು ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು. ಬೆಂಗಳೂರು ನಗರವನ್ನು ಸಂಪೂರ್ಣ ಅಪರಾಧ ಮುಕ್ತ ಮಾಡಲು ಸಾಧ್ಯವಿಲ್ಲ. ಆದರೆ, ನಗರದಲ್ಲಿ ನಡೆಯುತ್ತಿರುವ ಗೂಂಡಾ ಮತ್ತು ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸರು ಪ್ರಾಮಾಣಿಕವಾಗಿ ಪ್ರಯತ್ನಿಸಿದರೆ, ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

 ರಾಜಧಾನಿ ಸುರಕ್ಷಿತ ನಗರ: ಸಿಲಿಕಾನ್ ಸಿಟಿ ಬೆಂಗಳೂರು ಅಂತಾರಾಷ್ಟ್ರಿಯ ಮಟ್ಟದಲ್ಲಿ ಡೈನಾಮಿಕ್ ಸಿಟಿ ಎಂದು ಗುರುತಿಸಲ್ಪಟ್ಟಿದ್ದು, ಸಾರ್ವಜನಿಕರಲ್ಲಿ ಅತ್ಯಂತ ಸುರಕ್ಷಿತ ನಗರ ಎಂಬ ಭಾವನೆ ಮೂಡಿಸುವುದು ಸರಕಾರ ಮತ್ತು ಪೊಲೀಸರ ಜವಾಬ್ದಾರಿ. ಈ ಮೊದಲು ಕೇವಲ ಐದು ಸಹಾಯವಾಣಿಗಳಿದ್ದವು. ಪ್ರಸ್ತುತ 100ಕ್ಕೆ ಹೆಚ್ಚಿಸಲಾಗಿದ್ದು, ಎಲ್ಲರೂ ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಬೆಂಗಳೂರು ಪೊಲೀಸ್ ಅಧಿಕಾರಿಗಳೊಂದಿಗೆ ಲಂಡನ್ ಪೊಲೀಸರ ಕಾರ್ಯ ನಿರ್ವಹಣೆಯನ್ನು ತಿಳಿದುಕೊಳ್ಳಲು ತೆರಳಿದ್ದ ಸಂದರ್ಭದಲ್ಲಿ ಅಲ್ಲೂ ಇದೇ ಮಾದರಿಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಅಲ್ಲಿ ಸಾರ್ವಜನಿಕರ ದೂರು ಸ್ವೀಕರಿಸಲು 1700 ಸಿಬ್ಬಂದಿಗಳಿದ್ದರು. ಸಾರ್ವಜನಿಕರು ಕರೆ ಮಾಡಿದ ಹದಿನೈದು ನಿಮಿಷಗಳಲ್ಲೆ ಪೊಲೀಸರು ಪ್ರಕರಣ ನಡೆದ ಸ್ಥಳದಲ್ಲಿರುತ್ತಿದ್ದರು. ಇದರಿಂದ ಪ್ರೇರೇಪಿತರಾಗಿ ಬೆಂಗಳೂರಿನಲ್ಲೂ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ರೋಶನ್‌ಬೇಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ, ನಗರ ಪೊಲೀಸ್ ಆಯುಕ್ತ ಪ್ರವೀಣ್‌ಸೂದ್, ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಸೇರಿ ಪ್ರಮುಖರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X