ಬೆಳುವಾಯಿ ವಿಶ್ವಕರ್ಮ ಸಮಾಜ ಸೇವಾ ಸಮಿತಿ: ಪುಸ್ತಕ ವಿತರಣೆ ಸನ್ಮಾನ

ಮೂಡುಬಿದಿರೆ,ಜೂ.10: ಬೆಳುವಾಯಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಮಿತಿಯ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಸನ್ಮಾನ ಸಮಾರಂಭವು ಬೆಳುವಾಯಿ ಪಂಚಾಯತ್ ಸಭಾಭವನದಲ್ಲಿ ಜರಗಿತು.
ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾರ್ಕಳ ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ರತ್ನಾಕರ ಆಚಾರ್ಯ ಕಟ್ಟೇಮಾರ್, ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಸುಂದರ ಜಿ. ಆಚಾರ್ಯ, ಬೆಳುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ಭಾಸ್ಕರ ಆಚಾರ್ಯ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಪುರುಷೋತ್ತಮ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು ಹಾಗೂ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದರವರನ್ನು ಗೌರವಿಸಲಾಯಿತು.
ಅಧ್ಯಕ್ಷ ಸುಧಾಕರ ಆಚಾರ್ಯ ಸ್ವಾಗತಿಸಿದರು. ಕೂಡುವಳಿಕೆ ಮೊಕ್ತೇಸರ ಭೋಜ ಆಚಾರ್ಯ ವರದಿ ವಾಚಿಸಿದರು. ಕೋಶಾಧಿಕಾರಿ ರಮೇಶ್ ಆಚಾರ್ಯ ಲೆಕ್ಕಪತ್ರ ಮಂಡಿಸಿದರು. ಅರವಿಂದ ವೈ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಒಟ್ಟು 70 ವಿದ್ಯಾರ್ಥಿಗಳಿಗೆ 20ಸಾವಿರ ರೂ. ಮೌಲ್ಯದ ಪುಸ್ತಕಗಳನ್ನು ವಿತರಿಸಲಾಯಿತು.







