Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಂಗ್ಲರಿಗೆ ಮೊರ್ಗನ್ - ಸ್ಟೋಕ್ಸ್ ಆಸರೆ :...

ಆಂಗ್ಲರಿಗೆ ಮೊರ್ಗನ್ - ಸ್ಟೋಕ್ಸ್ ಆಸರೆ : ಆಸ್ಟ್ರೇಲಿಯ 277/9

ವಾರ್ತಾಭಾರತಿವಾರ್ತಾಭಾರತಿ10 Jun 2017 9:45 PM IST
share
ಆಂಗ್ಲರಿಗೆ ಮೊರ್ಗನ್ - ಸ್ಟೋಕ್ಸ್ ಆಸರೆ : ಆಸ್ಟ್ರೇಲಿಯ 277/9

ಬರ್ಮಿಂಗ್‌ಹ್ಯಾಮ್,ಜೂ.10: ಆಸ್ಟ್ರೇಲಿಯ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಟೂರ್ನಮೆಂಟ್ ‘ಎ’ ಗುಂಪಿನ ಪಂದ್ಯದಲ್ಲಿ ಗೆಲುವಿಗೆ 278 ರನ್‌ಗಳ ಸವಾಲನ್ನು ಪಡೆದಿರುವ ಇಂಗ್ಲೆಂಡ್‌ನ ಆಟಕ್ಕೆ ಮಳೆ ಅಡ್ಡಿಪಡಿಸಿದ್ದರೂ ಗೆಲುವಿಗಾಗಿ ಹೋರಾಟ ಮುಂದುವರಿದಿದೆ.

 ನಾಯಕ ಇಯಾನ್ ಮೊರ್ಗನ್ ಮತ್ತು ಬೆನ್ ಸ್ಟೋಕ್ಸ್ ಅರ್ಧಶತಕಗಳ ಕೊಡುಗೆ ನೀಡಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್‌ನ್ನು ಮುಂದುವರಿಸಿದರು. ಒಂದು ಹಂತದಲ್ಲಿ ಮಳೆಯಿಂದಾಗಿ ಆಟ ನಿಂತಾಗ ಇಂಗ್ಲೆಂಡ್ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 35 ರನ್ ಗಳಿಸಿತ್ತು . ಬಳಿಕ ಆಟ ಆರಂಭಗೊಂಡಾಗ ಮೊರ್ಗನ್ ಮತ್ತು  ಸ್ಟೋಕ್ಸ್ ತಂಡಕ್ಕೆ ನೆರವು ನೀಡಿದರು.

  ಆಸ್ಟ್ರೇಲಿಯಕ್ಕೆ ಸೆಮಿಫೈನಲ್‌ಗೇರಲು ಈ ಪಂದ್ಯದಲ್ಲಿ ಗೆಲ್ಲಬೇಕಾಗಿದೆ. ಆಸ್ಟ್ರೇಲಿಯದ ಹೇಝಲ್‌ವುಡ್ (17ಕ್ಕೆ 2) ಮತ್ತು ಮಿಚೆಲ್ ಸ್ಟಾರ್ಕ್(16ಕ್ಕೆ1) ದಾಳಿಗೆ ಸಿಲುಕಿದ ಇಂಗ್ಲೆಂಡ್‌ನ ಅಗ್ರ ಸರದಿಯ ದಾಂಡಿಗರು ಕಳಪೆ ಪ್ರದರ್ಶನ ನೀಡಿ ಪೆವಿಲಿಯನ್ ಸೇರಿದ್ದಾರೆ.

 ಸ್ಟಾರ್ಕ್ ಅವರ ಮೊದಲ ಓವರ್‌ನ ಮೊದಲ ಎಸೆತವನ್ನು ಜೇಸನ್ ರಾಯ್ ಬೌಂಡರಿಗಟ್ಟಿದರು. ಆದರೆ ಎರಡನೆ ಎಸೆತದಲ್ಲಿ ಚೆಂಡನ್ನು ಎದುರಿಸಲು ಹೋಗಿ ಎಲ್‌ಬಿಡಬ್ಲು ಬಲೆಗೆ ಬಿದ್ದು ಪೆವಿಲಿಯನ್ ಸೇರಿದರು.ಎರಡನೆ ಓವರ್‌ನಲ್ಲಿ ಹೇಲ್ಸ್ (0) ಖಾತೆ ತೆರೆಯದೆ ಹೇಝಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು.

 6 ಓವರ್‌ನ 4ನೆ ಎಸೆತದಲ್ಲಿ ರೂಟ್ (15) ಅವರು ಹೇಝಲ್‌ವುಡ್ ಎಸೆತದಲ್ಲಿ ಮ್ಯಾಥ್ಯೂ ವೇಡ್‌ಗೆ ಕ್ಯಾಚ್ ನೀಡಿದರು. ಬಳಿಕ ನಾಯಕ ಇಯಾನ್ ಮೊರ್ಗನ್  ಮತ್ತು ಬೆನ್ ಸ್ಟೋಕ್ಸ್ ಜೊತೆಯಾಗಿ ಇಂಗ್ಲೆಂಡ್‌ನ ಬ್ಯಾಟಿಂಗ್‌ನ್ನು ಮುನ್ನಡೆಸುವ ಹೊತ್ತಿಗೆ ಮಳೆ ಅವರ ಬ್ಯಾಟಿಂಗ್‌ಗೆ ಅಡ್ಡಿಪಡಿಸಿ ಆಟ ಸ್ಥಗಿತಗೊಂಡಿತು.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಆಸ್ಟ್ರೇಲಿಯ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟದಲ್ಲಿ 277 ರನ್ ಗಳಿಸಿದೆ.

  ಆ್ಯರೊನ್ ಫಿಂಚ್(68), ನಾಯಕ ಸ್ಟೀವ್ ಸ್ಮಿತ್(56) ಮತ್ತು ಟ್ರಾವಿಸ್ ಹೆಡ್(ಔಟಾಗದೆ 71) ಅರ್ಧಶತಕಗಳ ನೆರವಿನಲ್ಲಿ ಆಸ್ಟ್ರೇಲಿಯ ಸ್ಪರ್ಧಾತ್ಮಕ ಮೊತ್ತ ದಾಖಲಿಸಿದೆ.

  7.2ನೆ ಓವರ್‌ನಲ್ಲಿ ಡೇವಿಡ್ ವಾರ್ನರ್(21) ಅವರು ವುಡ್ ಎಸೆತದಲ್ಲಿ ಬಟ್ಲರ್‌ಗೆ ಕ್ಯಾಚ್ ನೀಡುವುದರೊಂದಿಗೆ ಆಸ್ಟ್ರೇಲಿಯದ ಮೊದಲ ವಿಕೆಟ್ ಪತನಗೊಂಡಿತು. ಎರಡನೆ ವಿಕೆಟ್‌ಗೆ ಆ್ಯರೊನ್ ಫಿಂಚ್ ಮತುತಿ ಸ್ಟೀವ್ ಸ್ಮಿತ್ 96 ರನ್‌ಗಳ ಜೊತೆಯಾಟ ನೀಡಿದರು. ಇವರ ಬ್ಯಾಟಿಂಗ್ ನೆರವಿನಲ್ಲಿ ತಂಡದ ಸ್ಕೋರ್ 22.5 ಓವರ್‌ನಲ್ಲಿ 136ಕ್ಕೆ ತಲುಪಿತು. ಮಾರ್ಕ್ ವುಡ್(33ಕ್ಕೆ 4)  ಮತ್ತು ಆದಿಲ್ ರಶೀದ್(41ಕ್ಕೆ 4) ಮತ್ತು ಬೆನ್ ಸ್ಟೋಕ್ಸ್ (61ಕ್ಕೆ 1) ದಾಳಿಗೆ ಸಿಲುಕಿದ ಆಸ್ಟ್ರೇಲಿಯ ಕೊನೆಯಲ್ಲಿ ಬೇಗನೆ ವಿಕೆಟ್‌ಗಳನ್ನು ಕೈಚೆಲ್ಲಿತು.

 ಹೆನ್ರಿಕ್ಸ್ (17), ಮ್ಯಾಕ್ಸ್‌ವೆಲ್(20),ಮ್ಯಾಥ್ಯೂ ವೇಡ್(2), ಮಿಚೆಲ್ ಸ್ಟಾರ್ಕ್(0), ಕಮಿನ್ಸ್(4), ಝಾಂಪ (0) ಇವರನ್ನು ಬೇಗನೆ ಕಳೆದುಕೊಂಡಿತು. ಆದರೆ ಹೆಡ್ ಅವರು ಇಂಗ್ಲೆಂಡ್‌ನ ದಾಳಿಯನ್ನು ಪುಡಿ ಪುಡಿ ಮಾಡಿದರು. ಅವರು 64 ಎಸೆತಗಳನ್ನು ಎದುರಿಸಿ 5 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಲ್ಲಿ 71 ರನ್ ಗಳಿಸಿ ಔಟಾಗದೆ ಉಳಿದರು. ಹೆಡ್ ಅವರು ಆಸ್ಟ್ರೇಲಿಯದ ಪರ ಆಟದಲ್ಲಿ ಸಿಕ್ಸರ್ ಸಿಡಿಸಿದ ಏಕೈಕ ಆಟಗಾರ. ಅವರು ಎರಡು ಸಿಕ್ಸರ್ ಸಿಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X