ರೈತನ ಮೇಲೆ ಕರಡಿ ದಾಳಿ

ಮುಂಡಗೋಡ, ಜೂ. 10: ಕರಡಿ ದಾಳಿಗೆ ರೈತನೋರ್ವ ಗಾಯಗೊಂಡ ಘಟನೆ ತಾಲೂಕಿನ ಕೊಡಂಬಿ ಪಂಚಾಯತ್ ವ್ಯಾಪ್ತಿಯ ಭದ್ರಾಪುರ ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡ ರೈತನನ್ನು ನಾಗನ ಗೌಡ ಬಸನ ಗೌಡರ(28) ಎಂದು ತಿಳಿದುಬಂದಿದೆ. ಶನಿವಾರ ಬೆಳಗ್ಗೆ ಗದ್ದೆಯ ಕೆಲಸದಲ್ಲಿ ನಿರತನಾಗಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿ ಗಾಯಗೊಳಿಸಿದೆ.
ಅಕ್ಕಪಕ್ಕದ ರೈತರು ಕರಡಿಯನ್ನು ಓಡಿಸಿ ಗಾಯಗೊಂಡ ರೈತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷಯ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ, ಗಾಯಗೊಂಡ ರೈತನ ಆರೋಗ್ಯ ವಿಚಾರಿಸಿದ್ದಾರೆ.
Next Story





