ಬೆಳ್ತಂಗಡಿ: ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ಬೆಳ್ತಂಗಡಿ, ಜೂ.11: ಬೆಳ್ತಂಗಡಿ ಜ್ಯೂನಿಯರ್ ಕಾಲೇಜು ಬಳಿ ಇರುವ ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಉಜಿರೆ ಖಾಸಗಿ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಂದೇಶ್ (21) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈತ ಕಾಸರಗೋಡ್ ತಲಪಾಡಿ ನಿವಾಸಿಯಾಗಿದ್ದು ಬೆಳ್ತಂಗಡಿ ವಸತಿ ನಿಲಯದಿಂದ ಕಾಲೇಜಿಗೆ ಹೋಗುತ್ತಿದ್ದು, ರವಿವಾರ ಮಧ್ಯಾಹ್ನ ಈತನ ಕೊಠಡಿಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಘಟನೆಗೆ ಕಾರಣವೇನೆಂದು ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಕೆ. ವಸಂತ ಬಂಗೇರ ಭೇಟಿ ನೀಡಿದರು. ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು ಭೇಟಿ ನೀಡಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





