ಉಡುಪಿ: ರಂಗ ಪ್ರಸಂಗ ಕಾರ್ಯಕ್ರಮ ಉದ್ಘಾಟನೆ

ಉಡುಪಿ, ಜೂ.11: ಪರ್ಯಾಯ ಶ್ರೀಪೇಜಾವರ ಮಠದ ಆಶ್ರಯದಲ್ಲಿ ಕಾಸರಗೋಡು ಸಿರಿಬಾಗಿಲು ವೆಂಕಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ರಂಗ-ಪ್ರಸಂಗ ಕಾರ್ಯಕ್ರಮವನ್ನು ಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಪರ್ಯಾಯ ಪೇಜಾವರ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ನೇರವೇರಿಸಿದರು. ಸೋದೆ ಮಠಾಧೀಶ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.
ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ್, ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಗಣೇಶ್ ರಾವ್, ತಲ್ಲೂರ್ ಶಿವರಾಂ ಶೆಟ್ಟಿ, ಕಾವು ಮಠದ ಲಕ್ಷ್ಮೀನಾರಾಯಣ ತಂತ್ರಿ, ಉದ್ಯಮಿಗಳಾದ ಮುನಿಯಾಲು ಉದಯ ಕುಮಾರ ಶೆಟ್ಟಿ, ಜಯ ರಾಮ್ ರಾಯ್ ಸಿರಿಬಾಗಿಲು, ಸುವರ್ಣ ಪ್ರತಿಷ್ಟಾನದ ಪ್ರಭಾಕರ ಸುವರ್ಣ, ಜ್ಯೋತಿಷಿ ಶಂಕರ ಪೈ ನೇರಳಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.
Next Story





