ಜೂ.12: ವಿಶ್ವ ಬಾಲಕರ್ಮಿಕ ಪದ್ಧತಿ ವಿರೋಧಿ ದಿನ
ಮಂಗಳೂರು, ಜೂ.11: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕಾರ್ಮಿಕ ಇಲಾಖೆ, ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ವಕೀಲರ ಸಂಘ, ಮಕ್ಕಳ ಸಹಾಯವಾಣಿ ಮತ್ತು ಸಂಬಂಧಿಸಿದ ಇಲಾಖೆಗಳು, ದ.ಕ. ಮಂಗಳೂರ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಕಾನೂನು ಅರಿವು ನೆರವು ಕಾರ್ಯಕ್ರಮವು ಜೂ. 12 ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್. ಬೀಳಗಿ ಕಾರ್ಯಕ್ರಮ ಉದ್ಘಾಟನೆ ಮಾಡುವರು. ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





