ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಜೂ.11: ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ 2017-18ನೆ ಸಾಲಿಗೆ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೊಮಾ ಮತ್ತು ವೃತ್ತಿಪರ ಪದವಿವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರಿಂದ ಪಡೆಯಬೇಕು. ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೊಮಾ ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಜೂನ್ 30 ಕೊನೆಯ ದಿನ. ವೃತ್ತಿಪರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಅರ್ಜಿ ಸ್ವೀಕರಿಸಲು ನವೆಂಬರ್ 30 ಕೊನೆಯಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆ, ಮಂಗಳೂರು ಇವರನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Next Story





