ಉಚಿತ ಸಾವಯವ ಕೃಷಿ ತರಬೇತಿ ಶಿಬಿರ
ಮಂಗಳೂರು, ಜೂ.11: ಕರ್ನಾಟಕ ಕೃಷಿ ಸಂಪನ್ಮೂಲ ಕೇಂದ್ರ, ಬಾಗಲಕೋಟ ಇವರು ಸಾವಯವ ಕೃಷಿ ಬಗ್ಗೆ ಮೂರು ದಿನಗಳ ಉಚಿತ ತರಬೇತಿ ಶಿಬಿರವನ್ನು ಜೂನ್ ತಿಂಗಳಿನಲ್ಲಿ ಏರ್ಪಡಿಸಿದ್ದಾರೆ.
ಶಿಬಿರದಲ್ಲಿ ಸಾವಯವ ಕೃಷಿಯ ಮಹತ್ವ, ಅವಶ್ಯಕತೆ, ಇತಿಹಾಸ, ಆಹಾರ ಮತ್ತು ತರಕಾರಿ ಬೆಳೆಗಳಲ್ಲಿ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಸಾವಯವ ಕೃಷಿ ಪದ್ಧತಿ, ಸಾವಯವ ಪದ್ಧತಿಯಲ್ಲಿ ಕೀಟ ಹಾಗೂ ರೋಗಗಳ ನಿರ್ವಹಣೆ, ಸಾವಯವ ಉತ್ಪನ್ನಗಳ ಪ್ರಮಾಣಿಕರಣ ಹಾಗೂ ಮಾರುಕಟ್ಟೆ ವ್ಯವಸ್ಥೆ, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು.
ತರಬೇತಿಯಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ನೀಡಲಾಗುವುದು. ಆಸಕ್ತರು ಜೂನ್ 15 ರೊಳಗೆ ತಮ್ಮ ಹೆಸರನ್ನು ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಗದ್ದನಕೇರಿ ರೋಡ್, ಬಾಗಲಕೋಟ-587103 ಮೊಬೈಲ್ ಸಂಖ್ಯೆ: 9482630790 ಸಂಪರ್ಕಿಸಲು ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟನೆ ತಿಳಿಸಿದೆ.
Next Story





