Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಲಿಬಾರ್‌ಗೆ ಬಲಿಯಾದ ರೈತರ ಮನೆಗೆ ಭೇಟಿ...

ಗೋಲಿಬಾರ್‌ಗೆ ಬಲಿಯಾದ ರೈತರ ಮನೆಗೆ ಭೇಟಿ ನೀಡಲು ಮೇಧಾ, ಅಗ್ನಿವೇಶ್‌ಗೆ ನಿರಾಕರಣೆ

ಪೊಲೀಸರಿಂದ ಸಾಮಾಜಿಕ ಕಾರ್ಯಕರ್ತರ ಬಂಧನ

ವಾರ್ತಾಭಾರತಿವಾರ್ತಾಭಾರತಿ11 Jun 2017 10:35 PM IST
share
ಗೋಲಿಬಾರ್‌ಗೆ ಬಲಿಯಾದ ರೈತರ ಮನೆಗೆ ಭೇಟಿ ನೀಡಲು ಮೇಧಾ, ಅಗ್ನಿವೇಶ್‌ಗೆ ನಿರಾಕರಣೆ

ಭೋಪಾಲ್, ಜೂ.11: ಮಧ್ಯಪ್ರದೇಶದ ಮಂದ್‌ಸೋರ್ ಜಿಲ್ಲೆಯಲ್ಲಿ ಪೊಲೀಸರ ಗೋಲೀಬಾರ್‌ನಲ್ಲಿ ಮೃತಪಟ್ಟ ರೈತರ ಕುಟುಂಬವರ್ಗದವರನ್ನು ಭೇಟಿಯಾಗಲು ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತರಾದ ಮೇಧಾ ಪಾಟ್ಕರ್, ಸ್ವಾಮಿ ಅಗ್ನಿವೇಶ್, ಯೋಗೇಂದ್ರ ಯಾದವ್ ಮತ್ತಿತರರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

   ಮಂದ್‌ಸೋರ್‌ನಲ್ಲಿ ಸೆಕ್ಷನ್ 144 ಜಾರಿಯಲ್ಲಿರುವ ಕಾರಣ ಅಲ್ಲಿಗೆ ಗುಂಪಾಗಿ ತೆರಳಬಾರದೆಂದು ಸೂಚಿಸಿದರೂ ಸುಮಾರು 40 ಜನರಿದ್ದ ತಂಡ ಮುಂದುವರಿದಾಗ ಅವರನ್ನು ಬಂಧಿಸಲಾಗಿದೆ. ಬಂಧಿತರನ್ನು ಜವೊರಾ ಎಂಬಲ್ಲಿಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಲ್ಲಿ ಮಧ್ಯಪ್ರದೇಶದ ಮಾಜಿ ಶಾಸಕರಾದ ಸುನಿಲಂ, ಕಲ್ಪನಾ ಪರುಲೇಕರ್ ಮತ್ತು ಪರಸ್ ಸಕ್ಲೇಚ ಸೇರಿದ್ದಾರೆ.

 ಶಾಂತಿ ಮತ್ತು ಸಹೋದರತೆಯ ವಾತಾವರಣ ನೆಲೆಸಲು ಸಹಾಯ ಮಾಡಲೆಂದು ನಾವು ಬಂದಿದ್ದೆವು. ಆದರೆ ಪೊಲೀಸರು ನಮ್ಮನ್ನು ಮುಂದುವರಿಯಲು ಬಿಡಲಿಲ್ಲ. ತಾವು ನಡೆಸಿರುವ ಅನ್ಯಾಯ ಹೊರಜಗತ್ತಿಗೆ ತಿಳಿಯಬಹುದು ಎಂಬ ಆತಂಕ ಅವರಲ್ಲಿರಬಹುದು ಎಂದು ಸ್ವಾಮಿ ಅಗ್ನಿವೇಶ್ ಪೊಲೀಸರು ಬಂಧಿಸಿದ ಬಳಿಕ ಹೇಳಿದರು.

ನಾವು ನಿಷೇಧಾಜ್ಞೆ ಉಲ್ಲಂಘಿಸಿದೆವು ಎಂಬ ಸುಳ್ಳು ಸುದ್ದಿ ಹಬ್ಬಲಾಗಿದೆ. ಆದರೆ ನಾವು ತಲಾ ನಾಲ್ಕು ಮಂದಿ ಒಂದು ತಂಡವಾಗಿ ತೆರಳಲು ಬಯಸಿದ್ದೆವು ಎಂದು ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

ನಾವು ಯಾರನ್ನೂ ಜಿಲ್ಲೆಯ ಒಳಪ್ರವೇಶಿಸಲು ಬಿಡುತ್ತಿಲ್ಲ. ಒಂದು ಸಣ್ಣ ಮಾತು ಅಥವಾ ಕ್ರಿಯೆ ಆ ಪ್ರದೇಶದಲ್ಲಿ ಮತ್ತೆ ಅಶಾಂತಿಗೆ ಕಾರಣವಾಗಬಹುದು. ಅಲ್ಲಿ ಕ್ರಮೇಣ ಪರಿಸ್ಥಿತಿ ಸಹಜತೆಗೆ ಮರಳುತ್ತಿದೆ ಎಂದು ಡಿಐಜಿ ಅವಿನಾಶ್ ಶರ್ಮ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X