ಕರಾವಳಿ ಜಿಲ್ಲೆಯಲ್ಲಿ ಮಳೆ ಇನ್ನಷ್ಟು ತೀವ್ರ
ಮಂಗಳೂರು ಜ.12: ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಜೂನ್ 13 ರಿಂದ 16 ರವರೆಗೆ ಭಾರೀ ಮಳೆ ಬೀಳುವ ಸಂಭವ ಇರುವುದರಿಂದ ಭಾರತ ಹವಾಮಾನ ಇಲಾಖೆ, ಬೆಂಗಳೂರು ಇವರು ಕರಾವಳಿ ಪ್ರದೇಶದಲ್ಲಿ ಯಾವುದೇ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಅಥವಾ ನದಿ ಪಾತ್ರಕ್ಕೆ ತೆರಳದಂತೆ ಸೂಚಿಸಿದ್ದಾರೆ.
ತಗ್ಗು ಪ್ರದೇಶದಲ್ಲಿ ಹಾಗೂ ನದಿ ತೀರದಲ್ಲಿ ವಾಸಿಸುವ ಸಾರ್ವಜನಿಕರು ಸಹ ತಗ್ಗು ಪ್ರದೇಶ/ ನದಿ ತೀರಕ್ಕೆ ತೆರಳದಂತೆ ದ.ಕ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.
Next Story





