ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ
ಬಯಲು ಸೀಮೆ ಪ್ರದೇಶಗಳಿಗೆ ಶಾಶ್ವತ ನೀರಾವರಿ ಹಾಗೂ ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸೋಮವಾರ ಬೆಳಗ್ಗಿನಿಂದಲೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕರ್ನಾಟಕ ಬಂದ್‌ಗೆ ಪೂರಕವಾದ ಬೆಂಬಲ ವ್ಯಕ್ತವಾಗಿಲ್ಲ. ಬಿಎಂಟಿಸಿ, ಕೆಎಸ್ಸಾರ್ಟಿಸಿ ಸಹಿತ ವಾಹನ ಸಂಚಾರ ಹಾಗೂ ಜನಜೀವನ ಎಂದಿನಂತೆ ಇತ್ತು. ಅಂಗಡಿ, ಮುಂಗಟ್ಟುಗಳು ತೆರೆದಿದ್ದವು. ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಶಾಲೆಗಳಿಗೆ ತೆರಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
Next Story





