ಕೈಕೊಟ್ಟ ಬೆಳೆ, ಸಾಲ ಬಾಧೆ : ರೈತ ಆತ್ಮಹತ್ಯೆ
ಶಿವಮೊಗ್ಗ, ಜೂ. 13: ಜಮೀನಿನಲ್ಲಿಯೇ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಕುರುಬರ ವಿಠಲಾಪುರ ಗ್ರಾಮದಲ್ಲಿ ವರದಿಯಾಗಿದೆ. ರುದ್ರಪ್ಪ (58) ಆತ್ಮಹತ್ಯೆಗೆ ಶರಣಾದ ರೈತ ಎಂದು ಗುರುತಿಸಲಾಗಿದೆ. ಮೃತರು ಎರಡು ಎಕರೆ ಕೃಷಿ ಭೂಮಿ ಹೊಂದಿದ್ದು, ಸೇವಂತಿಗೆ ಹೂವು ಬೆಳೆಯುತ್ತಿದ್ದರು. ಪ್ರಸ್ತುತ ಸಾಲಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಹೂವು ಬಂದಿರಲಿಲ್ಲ. ಜೊತೆಗೆ ಖಾಸಗಿಯಾಗಿ ಸುಮಾರು 2 ಲಕ್ಷ ರೂ. ಸಾಲ ಕೂಡ ಮಾಡಿಕೊಂಡಿದ್ದರು. ಕೈಕೊಟ್ಟ ಬೆಳೆ ಹಾಗೂ ಸಾಲದ ಬಾಧೆಯಿಂದ ಮನನೊಂದಿದ್ದ ರುದ್ರಪ್ಪರವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





