ಪಿಎಚ್‌ಡಿ ಪದವಿ ಪ್ರದಾನ

ಬೆಂಗಳೂರು, ಜೂ.13: ಎಚ್.ವಿ.ಅರುಣಚಲಪತಿ ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಪಾಲಕ ಡಾ.ಸುರೇಶ್ ಜಾಂಗೆ ಮಾರ್ಗದರ್ಶನದಲ್ಲಿ ಮಂಡಿಸಿದ ‘ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ’ ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ತಮಿಳುನಾಡಿನ ಭಾರತೀಯರ್ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಪ್ರದಾನಿಸಿ ಗೌರವಿಸಿದೆ.
ಎಚ್.ವಿ.ಅರುಣಚಲಪತಿ ಅವರು ಬೆಂಗಳೂರು ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜಿನ ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





