ಕೆಎಸ್ಸಾರ್ಟಿಸಿ ಬಸ್ಸು ಮರಕ್ಕೆ ಡಿಕ್ಕಿ :ಐವರಿಗೆ ಗಾಯ

ಪುತ್ತೂರು, ಜೂ.13: ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಪೋಳ್ಯ ತಿರುವಿನಲ್ಲಿ ಮಾಣಿ ಮೈಸೂರು ಹೆದ್ದಾರಿಯಲ್ಲಿ ಕೆಎಸ್ಸಾರ್ಟಿಸಿ ಬಸ್ಸೊಂದು ಹೆದ್ದಾರಿ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದು ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಮಂಗಳೂರಿನಿಂದ ಪುತ್ತೂರು ಕಡೆಗೆ ವೇಗವಾಗಿ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನ ಚಾಲಕ ಬಸ್ಸನ್ನು ಎಡ ಬದಿಗೆ ಸರಿಸಿದ ವೇಳೆ ಚಾಲಕನ ನಿಯಂತ್ರಣ ಕಳಕೊಂಡು ಬಸ್ ಮುಂದಕ್ಕೆ ಸಾಗಿ ಹೆದ್ದಾರಿ ಬದಿಯಲ್ಲಿರುವ ಮರವೊಂದಕ್ಕೆ ಡಿಕ್ಕಿ ಹೊಡೆಯಿತೆಂದು ತಿಳಿದು ಬಂದಿದೆ.
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಲೀಲಾ, ರೇಖಾ, ಪ್ರಕಾಶ್, ಶಾಹುಲ್ ಮತ್ತು ಇಬ್ರಾಹಿಂ ಎಂಬವರು ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ಪುತ್ತೂರು ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನಿಡಿದ್ದಾರೆ.
Next Story





