ಶೂಗಳಲ್ಲಿ ಚಿನ್ನ ಸಾಗಾಣೆ ಆರೋಪ: ವ್ಯಕ್ತಿಯ ಬಂಧನ
ಬೆಂಗಳೂರು, ಜೂ.13: ಶೂಗಳಲ್ಲಿ 58 ಲಕ್ಷ ಮೌಲ್ಯದ ಚಿನ್ನದ ಬಿಸ್ಕಿಟ್‌ಗಳನ್ನು ಕಳ್ಳ ಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ವಿ.ಎಂ.ಫಹಾದ್(37) ಎಂಬಾತ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ದುಬೈನಿಂದ ಬಂದ ಏರ್ ಇಂಡಿಯಾ 994 ವಿಮಾನದಲ್ಲಿ ಬಂದಿಳಿದಿದ್ದ ವಿ.ಎಂ. ಫಹಾದ್ ಸಂಶಯಾಸ್ಪದವಾಗಿ ನಡೆದಾಡುತ್ತಿದ್ದ. ಇದನ್ನು ಗಮನಿಸಿ ತಪಾಸಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು, ಆರೋಪಿಯ ಶೋವನ್ನು ತಪಾಸಣೆ ನಡೆಸಿದಾಗ, 58.60 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿಗಳನ್ನು ಸಾಗಿಸಲು ಯತ್ನಿಸುತ್ತಿರುವುದಾಗಿ ತಿಳಿದುಬಂದಿದೆ.
ಈ ಸಂಬಂಧ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Next Story





