ಬಬ್ಬುಕಟ್ಟೆ: ಶಾಲೆ ಕಡೆ ನನ್ನ ನಡೆ ಕಾರ್ಯಕ್ರಮ

ಉಳ್ಳಾಲ, ಜೂ. 13: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕಕ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ(ರಿ) ಮಂಗಳೂರು ಇವರ ಸಹಯೋಗದೊಂದಿಗೆ ಬಾಲ್ಯ ವಿವಾಹ ತಡೆ ಮತ್ತು ಶಾಲೆ ಕಡೆ ನನ್ನ ನಡೆ ಕುರಿತು ಜಾಗೃತಿ ಆಂದೋಲನ ಬಬ್ಬುಕಟ್ಟೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲನಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಳ್ಳಾಲ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಉಸ್ಮಾನ್ ಕಲ್ಲಾಪು, ಕಾನೂನು ತಜ್ಞೆ ಶ್ರೀಮತಿ ಗೌರಿ, ಮಂಗಳೂರು ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಶ್ಯಾಮಲಾ, ಸಮೂಹ ಸಂಪನ್ಮೂಲ ವ್ಯಕ್ತಿ ಹರ್ಷಲತಾ, ಸಮಾಜ ಸೇವಕಿ ಸುಹಾಸಿನಿ ಬಬ್ಬುಕಟ್ಟೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬಬ್ಬುಕಟ್ಟೆ ಮುಖ್ಯ ಶಿಕ್ಷಕಿ ಸೀತಾಲಕ್ಷ್ಮಿ ಉಪಸ್ಥಿತರಿದ್ದರು.
ಸರಕಾರಿ ಪ್ರೌಢ ಶಾಲೆ ಬಬ್ಬುಕಟ್ಟೆ ಮುಖ್ಯ ಶಿಕ್ಷಕಿ ಉಷಾ ಸ್ವಾಗತಿಸಿದರು. ಅಂಗನವಾಡಿ ಮೇಲ್ವಿಚಾರಕಿ ಶಂಕರಿ ಕಾರ್ಯಕ್ರಮ ನಿರೂಪಿಸಿದರು.





