ಹಾಲು ಉತ್ಪಾದಕರ ಬ್ಯಾಂಕ್ ಖಾತೆಗಳಿಗೆ ಸರಕಾರದಿಂದ ಆಧಾರ್ ಲಿಂಕ್ ಮಾಡಲು ಚಿಂತನೆ: ಎ.ಮಂಜು

ಬೆಂಗಳೂರು, ಜೂ.13: ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನವನ್ನು ನೀಡಲು ಸರಕಾರವೇ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡಲು ಚಿಂತನೆ ನಡೆಸಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಎ.ಮಂಜು ಹೇಳಿದ್ದಾರೆ.
ಮಂಗಳವಾರ ವಿಧಾನ ಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಟಿ.ಎ.ಶರವಣ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಆಗಸ್ಟ್ 2016ರಿಂದ ಆಧಾರ್ ಆಧಾರಿತ ಬ್ಯಾಂಕ್ ಖಾತೆಗಳಿಗೆ ಕಡ್ಡಾಯವಾಗಿ ಪ್ರೋತ್ಸಾಹ ಧನವನ್ನು ನೀಡಲು ಸೂಚನೆ ನೀಡಲಾಗಿತ್ತು. ಆದರೆ, ಸದ್ಯ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನವನ್ನು ನೀಡಲು ಸರಕಾರವೇ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡಲು ಚಿಂತನೆ ನಡೆಸಿದೆ ಎಂದು ಹೇಳಿದರು.
Next Story





