ಎಸೆಸೆಲ್ಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ ವಿದ್ಯಾರ್ಥಿಗಳಿಗೆ ಪುರಸ್ಕಾರ

ಭಟ್ಕಳ, ಜೂ. 14: ಮುರ್ಡೇಶ್ವರದ ಆರ್.ಎನ್.ಎಸ್. ವಿದ್ಯಾನಿಕೇತನದಲ್ಲಿ 2016-17 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿದ ಆರ್.ಎನ್.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಎಂ. ವಿ ಹೆಗಡೆ ವಿದ್ಯಾರ್ಥಿಗಳು ಶಿಕ್ಷಣದ ಮಹತ್ವವನ್ನುಅರಿಯಬೇಕು. ಸಂಸ್ಕಾರ, ಸಂಸ್ಕೃತಿಯನ್ನುಜೀವನದಲ್ಲಿ ಅಳವಡಿಸಿ ಶಿಕ್ಷಣದಲ್ಲಿ ಉನ್ನತ ಸಾಧನೆ ಮಾಡುವಂತೆ ಕರೆ ನೀಡಿದರು.
ಸತತ ಪರಿಶ್ರಮ ಮತ್ತು ಶ್ರಧ್ಧೆಯಿಂದತಮ್ಮ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಿದಲ್ಲಿ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಶ್ರಮ ಮತ್ತು ಶ್ರಧ್ಧೆಯಿಂದ ಜ್ಞಾನಾರ್ಜನೆ ಮಾಡಿದರೆ ಯಶಸ್ಸು ತಮ್ಮದಾಗುವುದು ಎಂದರು.
ಪ್ರಾಂಶುಪಾಲ ಡಾ.ಸುರೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಮೌಲ್ಯಾಧಾರಿತ ಶಿಕ್ಷಣದ ಬಗ್ಗೆ ಮಾರ್ಗದರ್ಶನ ನೀಡಿದರು.
ರಾಜ್ಯಕ್ಕೆ 5ನೇ ರ್ಯಾಂಕ್ ಹಾಗೂ ಭಟ್ಕಳ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಅಪೇಕ್ಷಾ ಮುರ್ಡೇಶ್ವರ ಸಹಿತ ಶೇಕಡಾ 90 ಅಂಕಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ನಾಗರಾಜ ನಾಯ್ಕ ಸ್ವಾಗತಿಸಿದರು. ಪ್ಲಾವಿಯಾ ಫೆರ್ನಾಂಡಿಸ್ ಕಾರ್ಯಕ್ರಮವನ್ನು ನಿರ್ವಹಿಸಿದರು, ಶಿಕ್ಷಕಿ ಸುಪ್ರೀಯಾ ವಂದಿಸಿದರು.







