ನೇರ ನೇಮಕಾತಿಗೆ ದಾಖಲೆಗಳ ಪರಿಶೀಲನೆ
ಉಡುಪಿ, ಜೂ.14: ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಡಿ ವೃಂದದ ಅಡುಗೆಯವರು ಮತ್ತು ಅಡುಗೆ ಸಹಾಯಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಅರ್ಜಿ ಸಲ್ಲಿಸಿರುವ ಅ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿ ನಿಗದಿಪಡಿಸಲಾಗಿದೆ.
ಅಡುಗೆಯವರ ಹುದ್ದೆಗೆ ದಾಖಲಾತಿ ಪರಿಶೀಲನೆ ಜೂ.22ರಂದು, ಅಡುಗೆ ಸಹಾಯಕರ ದಾಖಲಾತಿ ಪರಿಶೀಲನೆ ಜೂ.23ರಂದು ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಅಡುಗೆಯವರ ಅಡುಗೆ ತಯಾರಿಕೆ ಪರೀಕ್ಷೆ ಜೂ.28ರಂದು ಹಾಗೂ ಅಡುಗೆ ಸಹಾಯಕರ ಅಡುಗೆ ತಯಾರಿ ಪರೀಕ್ಷೆ ಜೂ.29ರಂದು ಬನ್ನಂಜೆ ಶಿವಗಿರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಜು.3ರಂದು ತಾತ್ಕಾಲಿಕ ಆಯ್ಕೆ ಪಟ್ಟಿಪ್ರಕಟಗೊಳ್ಳಲಿದ್ದು, ಜು.18ರಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟಗೊಳ್ಳಲಿದೆ.

ದಾಖಲಾತಿ ಪರಿಶೀಲನೆಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಮೆರಿಟ್ ಆಧಾರದ ಮೇಲೆ 1:5ರ ಅನುಪಾತದಲ್ಲಿ ದಾಖಲಾತಿ ಪರಿಶೀಲನೆ ನಡೆಸಲು ನಿರ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ -http://udupi.nic.in-ನಲ್ಲಿ ದಾಖಲಾತಿ ಪರಿಶೀಲನೆಗೆ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಕರೆ ಪತ್ರದಲ್ಲಿ ತಿಳಿಸಿರುವಂತೆ ಅಗತ್ಯ ದಾಖಲಾತಿಗಳೊಂದಿಗೆ ದಾಖಲಾತಿ ಪರಿಶೀಲನೆಗೆ ನಿಗದಿತ ದಿನ ಹಾಗೂ ಸಮಯದಲ್ಲಿ ಹಾಜರಾಗುವಂತೆ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574881ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.