Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶೇಡಿಮನೆ ಬಾಲಕಿಯ ಆತ್ಮಹತ್ಯೆ ಯತ್ನ...

ಶೇಡಿಮನೆ ಬಾಲಕಿಯ ಆತ್ಮಹತ್ಯೆ ಯತ್ನ ಪ್ರಕರಣ: ಜಾಮೀನಿಗಾಗಿ ಆರೋಪಿಗಳು ನ್ಯಾಯಾಲಯಕ್ಕೆ

ವಾರ್ತಾಭಾರತಿವಾರ್ತಾಭಾರತಿ14 Jun 2017 9:53 PM IST
share

ಉಡುಪಿ, ಜೂ.14: ಅಮಾಸೆಬೈಲು ಠಾಣಾ ವ್ಯಾಪ್ತಿಯ ಶೇಡಿಮನೆ ಗ್ರಾಮದ ಆರಸಮ್ಮಕಾನು ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಕಿರುಕುಳ ಹಾಗೂ ಆಕೆಯ ಆತ್ಮಹತ್ಯೆ ಪ್ರಯತ್ನಕ್ಕೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಇಬ್ಬರು ಆರೋಪಿಗಳು ಜಾಮೀನಿಗಾಗಿ ಪ್ರಯತ್ನಿಸಿದ್ದು, ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಿತು.

ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯ ಆರೋಗ್ಯ ಸ್ಥಿತಿಯ ಕುರಿತು ಸಂಪೂರ್ಣ ವೈದ್ಯಕೀಯ ವರದಿಯನ್ನು ಕೋರ್ಟ್‌ಗೆ ಸಲ್ಲಿಸುವಂತೆ ನ್ಯಾಯಾಧೀಶರು ತನಿಖಾಧಿಕಾರಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿದರು.

ಈಗಾಗಲೇ ಪೊಲೀಸರ ಬಂಧನದಲ್ಲಿರುವ ಆರೋಪಿ ವಿನಯ ಶೆಟ್ಟಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರೆ, ತಲೆಮರೆಸಿಕೊಂಡಿರುವ ಇನ್ನೊಬ್ಬ ಆರೋಪಿ ಪ್ರಶಾಂತ್ ಹೆಗ್ಡೆ ಪರ ನಿರೀಕ್ಷಣಾ ಜಾಮೀನು ಅರ್ಜಿ ವಕೀಲರ ಮೂಲಕ ಕೋರ್ಟ್‌ಗೆ ಸಲ್ಲಿಸಲ್ಪಟ್ಟಿದೆ. ಈ ಎರಡೂ ಅರ್ಜಿಗಳ ವಿಚಾರಣೆ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಪ್ರಸಾದ್ ಹೆಗ್ಡೆ ನಿರೀಕ್ಷಣಾ ಜಾಮೀನಿಗೆ ಇದುವರೆಗೆ ಅರ್ಜಿ ಸಲ್ಲಿಸಿಲ್ಲ. ಆತನ ಬಂಧನಕ್ಕೆ ಅಮಾಸೆಬೈಲು ಪೊಲೀಸರು ಕಾರ್ಯಾಚರಣೆ ನಡೆಸುತಿದ್ದಾರೆ.

ಇಂದು ಇಬ್ಬರು ಆರೋಪಿಗಳ ಪರವಾಗಿ ಉಡುಪಿ ಮತ್ತು ಕುಂದಾಪುರದ ನ್ಯಾಯವಾದಿಗಳು ಜಾಮೀನು ನೀಡುವಂತೆ ನ್ಯಾಯಾಲಯದ ಮುಂದೆ ವಾದ ಮಂಡಿಸಿದರು. ಪ್ರತಿವಾದ ಮಂಡಿಸಿದ ವಿಶೇಷ ಸರಕಾರಿ ಅಭಿಯೋಜಕ (ಪೋಕ್ಸೋ) ವಿಜಯ ವಾಸು ಪೂಜಾರಿ, ಆರೋಪಿಗಳಿಗೆ ಜಾಮೀನು ನೀಡವುದನ್ನು ವಿರೋಧಿಸಿ ವಾದ ಮಂಡಿಸಿದರು.

ತಮ್ಮ ವಾದಕ್ಕೆ ಮುಂಬಯಿಯ ಆಸ್ಪತ್ರೆಯಲ್ಲಿ 42 ವರ್ಷಗಳ ಕಾಲ ಜೀವನ್ಮರಣ ಮಧ್ಯ ಹೋರಾಡಿದ ನರ್ಸ್ ಅರುಣಾ ಶಾನುಭಾಗ್ ಪ್ರಕರಣ ಸೇರಿದಂತೆ ಹಲವು ತೀರ್ಪುಗಳನ್ನು ಉಲ್ಲೇಖಿಸಿ ತಮ್ಮ ವಾದ ಮಂಡಿಸಿದರು.

ಆತ್ಯಹತ್ಯೆಗಾಗಿ ಬಾಲಕಿ ಕುಡಿದ ವಿಷ ಅತ್ಯಂತ ಅಪಾಯಕಾರಿಯಾಗಿದ್ದು, ಇದರಿಂದ ಆಕೆಯ ದೇಹದ ಮೇಲೆ ಯಾವ ಪರೀಣಾಮ ಉಂಟಾಗುತ್ತಿದೆ ಎಂಬುದನ್ನು ಕಾದು ನೋಡಬೇಕಾಗಿದೆ. ಈ ವಿಷ ಕುಡಿದವರು ಮೇಲ್ನೋಟಕ್ಕೆ ಆರೋಗ್ಯವಂತರಂತೆ ಕಂಡರೂ, ಆಂತರಿಕ ಆರೋಗ್ಯ ಹದಗೆಟ್ಟಿರುತ್ತದೆ ಎಂದವರು ವಿವರಿಸಿದರು.

ಬಾಲಕಿ ಇನ್ನೂ ಆಸ್ಪತ್ರೆಯಲ್ಲಿದ್ದಾಳೆ. ಹೀಗಾಗಿ ಆರೋಪಿಗಳಿಗೆ ಜಾಮೀನು ನೀಡದಂತೆ ಅವರು ವಾದಿಸಿದರು. ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗಿ ಪರಿಸ್ಥಿತಿ ಬಿಗಡಾಯಿಸಬಹುದು ಎಂದರು.12 ದಿನಗಳ ಬಳಿಕವೂ ಆಕೆ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೊಂದು ಸೂಕ್ಷ್ಮ ವಿಷಯವಾಗಿರುವುದರಿಂದ ಜಾಮೀನು ಅರ್ಜಿ ವಜಾ ಮಾಡಬೇಕು ಎಂದು ಸರಕಾರಿ ಅಭಿಯೋಜಕರು ಮನವಿ ಮಾಡಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಟಿ.ವೆಂಕಟೇಶ್ ನಾಯ್ಕಾ, ಬಾಲಕಿಯ ವೈದ್ಯಕೀಯ ವರದಿಯನ್ನು ಸಲ್ಲಿಸುವಂತೆ ಆದೇಶಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X