Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಕ್ತದಾನದ ಬಗ್ಗೆ ತಪ್ಪುಕಲ್ಪನೆ...

ರಕ್ತದಾನದ ಬಗ್ಗೆ ತಪ್ಪುಕಲ್ಪನೆ ಬಿಟ್ಟುಬಿಡಿ: ನ್ಯಾ.ಲತಾ

ವಾರ್ತಾಭಾರತಿವಾರ್ತಾಭಾರತಿ14 Jun 2017 10:51 PM IST
share
ರಕ್ತದಾನದ ಬಗ್ಗೆ ತಪ್ಪುಕಲ್ಪನೆ ಬಿಟ್ಟುಬಿಡಿ: ನ್ಯಾ.ಲತಾ

ಉಡುಪಿ, ಜೂ.14: ರಕ್ತದಾನದ ಕುರಿತು ಅನೇಕ ಮಂದಿ ತಪ್ಪು ತಿಳಿದಿದ್ದಾರೆ. ಆದರೆ ರಕ್ತದಾನದಿಂದ ಒಬ್ಬ ವ್ಯಕ್ತಿಯ ಜೀವ ಉಳಿಸಬಹುದಾಗಿದ್ದು, ಯಾವುದೇ ತಪ್ಪು ಅಭಿಪ್ರಾಯ ಇಟ್ಟುಕೊಳ್ಳದೇ ಪ್ರತಿಯೊಬ್ಬರೂ ರಕ್ತದಾನ ಮಾಡಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ ಹೇಳಿದ್ದಾರೆ.

ಬುಧವಾರ ಉಡುಪಿ ಅಜ್ಜರಕಾಡಿನಲ್ಲಿರುವ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
 

ರಕ್ತದಾನ ಮಾಡುವುದರಿಂದ ನಿಶ್ಯಕ್ತಿ, ಅನಾರೋಗ್ಯ ಉಂಟಾಗುತ್ತದೆ ಎಂಬ ತಪ್ಪು ಕಲ್ಪನೆ ಅನೇಕರಲ್ಲಿದೆ. ಆದರೆ ಅಶಕ್ತರು, ಅನಾರೋಗ್ಯ ಪೀಡಿತರನ್ನು ಹೊರತು ಪಡಿಸಿ, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ 56 ದಿನಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ. ರಕ್ತದಾನದಿಂದ ದೇಹದಲ್ಲಿ ಶುದ್ದ ರಕ್ತ ಉತ್ಪಾದನೆಯಾಗುವುದರಿಂದ, ವ್ಯಕ್ತಿ ಆರೋಗ್ಯವಂತರಾಗುವುದಲ್ಲದೇ, ಇನ್ನಷ್ಟು ಚಟುವಟಿಕೆಯಿಂದ ಕ್ರಿಯಾಶೀಲರಾಗಿರಬಹುದು ಎಂದರು.

ರಕ್ತದಾನ ಅತ್ಯಮೂಲ್ಯವಾದ ದಾನ. ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಮತ್ತೊಬ್ಬರ ಜೀವ ಉಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಲತಾ ಹೇಳಿದರು. ಕಾರ್ಯಕ್ರಮದಲ್ಲಿ 59 ಬಾರಿ ರಕ್ತದಾನ ಮಾಡಿದ ಕೆಎಂಸಿ ಮಣಿಪಾಲದ ಟಿ.ನರಹರಿ ಪೈ ಮತ್ತು 45 ಬಾರಿ ರಕ್ತದಾನ ಮಾಡಿದ ಮುದರಂಗಡಿಯ ಉಪನ್ಯಾಸಕರಾದ ದೇವದಾಸ್ ಪಾಟ್ಕರ್‌ರನ್ನು ಸನ್ಮಾನಿಸಲಾಯಿತು.

ಹೆಚ್ಚು ಬಾರಿ ರಕ್ತದಾನ ಮಾಡಿದ ವಿದ್ಯಾರ್ಥಿಗಳಾದ ಬ್ರೆಂಡನ್ ಲೋಬೋ, ಬ್ಲೆನ್ಸಿಲ್ ಲೆವಿಸ್, ಶೈಲೇಶ್ ಕುಂದರ್, ಅಭಿಲಾಷ್ ಆರ್ ಜತ್ತನ್ನ, ವಿಶ್ವಾಸ್, ಶ್ರೀನಾಥ್ ಪ್ರಭು ಹಾಗೂ ನಾಗೇಶ್‌ರನ್ನು ಸಹ ಸನ್ಮಾನಿಸಲಾಯಿತು.

ಉಡುಪಿ ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷ ಡಾ.ಉಮೇಶ್ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ. ಅರವಿಂದ ನಾಯಕ್ ಅಮ್ಮುಂಜೆ ಉಪಸ್ಥಿತರಿದ್ದರು.
ಉಡುಪಿ ರೆಡ್‌ಕ್ರಾಸ್‌ನ ಉಪಸಭಾಪತಿ ಡಾ.ಅಶೋಕ್ ಕುಮಾರ್ ಸ್ವಾಗತಿಸಿ ಕಾರ್ಯದರ್ಶಿ ಜೆ.ಸಿ. ಜನಾರ್ಧನ ವಂದಿಸಿದರು. ಜೂನಿಯರ್ ರೆಡ್‌ಕ್ರಾಸ್ ಅಧ್ಯಕ್ಷ ಜಯರಾಮ ಆಚಾರ್ಯ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X