Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿದೇಶಗಳಲ್ಲಿ ದುಡಿಯುತ್ತಿರುವ ಭಾರತೀಯರು...

ವಿದೇಶಗಳಲ್ಲಿ ದುಡಿಯುತ್ತಿರುವ ಭಾರತೀಯರು ಕಳೆದ ವರ್ಷ ಕಳಿಸಿದ ಹಣ ಎಷ್ಟು ಗೊತ್ತೇ?

ವಿಶ್ವದಲ್ಲೇ ಹೀಗೆ ಅತಿಹೆಚ್ಚು ಆದಾಯ ಪಡೆಯುವ ದೇಶ ಭಾರತ

ವಾರ್ತಾಭಾರತಿವಾರ್ತಾಭಾರತಿ15 Jun 2017 4:59 PM IST
share
ವಿದೇಶಗಳಲ್ಲಿ ದುಡಿಯುತ್ತಿರುವ ಭಾರತೀಯರು ಕಳೆದ ವರ್ಷ ಕಳಿಸಿದ ಹಣ ಎಷ್ಟು ಗೊತ್ತೇ?

ನ್ಯೂಯಾರ್ಕ್,ಜೂ.15: ವಿಶ್ಯಾದ್ಯಂತ ದುಡಿಯುತ್ತಿರುವ ಭಾರತೀಯರು ಕಳೆದ ವರ್ಷ ಸ್ವದೇಶಕ್ಕೆ 62.7 ಶತಕೋಟಿ ಡಾಲರ್‌ಗಳನ್ನು ರವಾನಿಸಿದ್ದಾರೆ. ತನ್ಮೂಲಕ ಭಾರತವು ಚೀನಾವನ್ನೂ ಹಿಂದಿಕ್ಕಿ ವಿಶ್ವದಲ್ಲಿಯೇ ಈ ರೀತಿ ಅತಿ ಹೆಚ್ಚಿನ ಆದಾಯವನ್ನು ಗಳಿಸುತ್ತಿ ರುವ ದೇಶವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ವಿಶ್ವಸಂಸ್ಥೆಯ ವರದಿಯೊಂದು ಹೇಳಿದೆ.

ಕೃಷಿ ಅಭಿವೃದ್ಧಿಗಾಗಿ ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ನಿಧಿ(ಐಎಫ್‌ಎಡಿ)ಯು ನಡೆಸಿದ ‘ಒನ್ ಫ್ಯಾಮಿಲಿ ಅಟ್ ಎ ಟೈಮ್’ ಅಧ್ಯಯನವು 2016ರಲ್ಲಿ ವಿಶ್ವಾದ್ಯಂತ ಸುಮಾರು 200 ಮಿಲಿಯ ವಲಸಿಗರು ತಮ್ಮ ಕುಟುಂಬಗಳಿಗೆ 445 ಬಿಲಿಯನ್ ಡಾ.ಗೂ ಅಧಿಕ ಹಣವನ್ನು ಕಳುಹಿಸಿದ್ದಾರೆ ಎಂದು ತಿಳಿಸಿದೆ. ಈ ಹಣದ ಮೊತ್ತ ಕಳೆದೊಂದು ದಶಕದಿಂದ ವಾರ್ಷಿಕ ಸರಾಸರಿ ಶೇ.4.2ರ ದರದಲ್ಲಿ ಏರಿಕೆಯಾಗುತ್ತಿದ್ದು, 2007ರಲ್ಲಿ 296 ಬಿ.ಡಾ.ಗಳಿದ್ದುದು 2016ರಲ್ಲಿ 445 ಬಿ.ಡಾ.ಗಳಿಗೆ ಹೆಚ್ಚಿದೆ. ಈ ಪೈಕಿ ಶೇ.80ರಷ್ಟು ಹಣ ಭಾರತ,ಚೀನಾ ಫಿಲಿಪ್ಪೀನ್ಸ್,ಮೆಕ್ಸಿಕೊ ಮತ್ತು ಪಾಕಿಸ್ತಾನ ಸೇರಿದಂತೆ 23 ದೇಶಗಳಿಗೆ ರವಾನೆಯಾಗಿದೆ. ವಾರ್ಷಿಕ ಮೊತ್ತದ ಅರ್ಧದಷ್ಟು ಹಣ ಅಮೆರಿಕ,ಸೌದಿ ಅರೇಬಿಯಾ ಮತ್ತು ರಷ್ಯಾ ಸೇರಿದಂತೆ 10 ರಾಷ್ಟ್ರಗಳಿಂದ ವಿವಿಧೆಡೆಗಳಿಗೆ ರವಾನೆ ಯಾಗಿದೆ.

2016ರಲ್ಲಿ ಭಾರತವು 62.7 ಬಿ.ಡಾ.ಗಳನ್ನು ಸ್ವೀಕರಿಸಿದ್ದರೆ, ನಂತರದ ಸ್ಥಾನಗಳಲ್ಲಿ ಚೀನಾ(61 ಬಿ.),ಫಿಲಿಪ್ಪೀನ್ಸ್(30 ಬಿ.) ಮತ್ತು ಪಾಕಿಸ್ತಾನ(20 ಬಿ.)ಗಳಿವೆ.

ಕಳೆದೊಂದು ದಶಕದಲ್ಲಿ ಮೊದಲ ಬಾರಿಗೆ ಈ ಅಧ್ಯಯನವನ್ನು ನಡೆಸಲಾಗಿದೆ. 2007ರಲ್ಲಿ ಚೀನಾ 38.4 ಬಿ.ಡಾ.ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, 37.2 ಬಿ.ಡಾ.ಗಳೊಡನೆ ಭಾರತವು ಎರಡನೇ ಸ್ಥಾನದಲ್ಲಿತ್ತು.

ವಲಸಿಗರ ಪೈಕಿ ಅತ್ಯಂತ ಹೆಚ್ಚು ಅಂದರೆ 77 ಮಿ.ಜನರು ಏಷ್ಯಾ ಮೂಲದವ ರಾಗಿದ್ದಾರೆ. ಈ ಪೈಕಿ 48 ಮಿ.ಜನರು ಏಷ್ಯಾ ಪ್ರದೇಶದಲ್ಲಿಯೇ ದುಡಿಯುತ್ತಿದ್ದಾರೆ. ಕಳೆದೊಂದು ದಶಕದಲ್ಲಿ ಏಷ್ಯಾ ಮತ್ತು ಪೆಸಿಫಿಕ್‌ಗಳಿಗೆ ಹಣ ರವಾನೆಯ ಪ್ರಮಾಣದಲ್ಲಿ ಶೇ.87ರಷ್ಟು ಏರಿಕೆಯಾಗಿ 244 ಬಿ.ಡಾ.ಗಳಿಗೆ ತಲುಪಿದೆಯಾದರೂ ವಲಸೆಯ ಪ್ರಮಾಣದಲ್ಲಿ ಕೇವಲ ಶೇ.33ರಷ್ಟು ಏರಿಕೆಯಾಗಿದೆ ಎಂದು ವರದಿಯು ತಿಳಿಸಿದೆ.​

share
ವಾರ್ತಾಭಾರತಿ
ವಾರ್ತಾಭಾರತಿ
Next Story
X