ವೆಸ್ಟ್ಇಂಡಿಸ್ ಪ್ರವಾಸಕ್ಕೆ ಟೀಮ್ ಇಂಡಿಯಾ ಪ್ರಕಟ;ಮೂವರು ವಿಕೆಟ್ ಕೀಪರ್‌ಗಳಿಗೆ ತಂಡದಲ್ಲಿ ಸ್ಥಾನ

ಹೊಸದಿಲ್ಲಿ, ಜೂ.15: ವೆಸ್ಟ್‌ಇಂಡೀಸ್ ವಿರುದ್ಧದ ಐದು ಏಕದಿನ ಪಂದ್ಯಗಳ ಸರಣಿಗೆ ಟೀಮ್ ಇಂಡಿಯಾ ಪ್ರಕಟಗೊಂಡಿದ್ದು, ಮೊದಲ ಬಾರಿ ಮೂವರು ವಿಕೆಟ್ ಕೀಪರ್‌ಗಳಿಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.
ಜೂ.23ರಿಂದ ಆರಂಭವಾಗಲಿರುವ ಸರಣಿಯು ಜುಲೈ 6ರಂದು ಕೊನೆಗೊಳ್ಳಲಿದೆ. ವಿರಾಟ್ ಕೊಹ್ಲಿ ನಾಯಕತ್ವದ 15 ಮಂದಿ ಆಟಗಾರರ ಟೀಮ್ ಇಂಡಿಯಾದಲ್ಲಿ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಇವರಿಗೆ ಬದಲಿಗಾಗಿ ಇಬ್ಬರು ವಿಕೆಟ್ ಕೀಪರ್‌ಗಳಿದ್ದಾರೆ. ಅವರೆಂದರೆ ದಿಲ್ಲಿಯ ಯುವ ವಿಕೆಟ್ ಕೀಪರ್ ರಿಶಭ್ ಪಂತ್ ಮತ್ತು ಮುರಳಿ ಕಾರ್ತಿಕ್ ಸ್ಥಾನ ಪಡೆದಿದ್ದಾರೆ.
ಸ್ಪಿನ್ನರ್ ಕುಲದೀಪ್ ಯಾದವ್‌ಗೆ ಸ್ಥಾನ ನೀಡಲಾಗಿದೆ.ರೋಹಿತ್ ಶರ್ಮ ಮತ್ತು ಜಸ್‌ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.
19ರ ಹರೆಯದ ಆಟಗಾರ ಪಂತ್ ಅವರು ಅಂಡರ್-19 ವರ್ಲ್ಡ್ ಕಪ್ ಮತ್ತು ರಣಜಿ ಟ್ರೋಫಿ ಟೂರ್ನಿಯಲ್ಲಿ ದಿಲ್ಲಿ ತಂಡದ ಪರ ಉತ್ತಮ ಪ್ರದರ್ಶನ ನೀಡಿದ್ದರು. ಐಪಿಎಲ್ ತಂಡದಲ್ಲಿ ದಿಲ್ಲಿಡೇರ್‌ಡೆವಿಲ್ಸ್ ತಂಡದ ಪರ 366 ರನ್ ದಾಖಲಿಸಿದ್ದರು.
22ರ ಹರೆಯದ ಕುಲ್‌ದೀಪ್ ಯಾದವ್ ಏಕದಿನ ಕ್ರಿಕೆಟ್‌ನಲ್ಲಿ ಇನ್ನಷ್ಟೇ ಆಡಬೇಕಿದೆ. ಕಳೆದ ಮಾರ್ಚ್‌ನಲ್ಲಿ ಧರ್ಮಶಾಲಾದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 4 ವಿಕೆಟ್ ಉಡಾಯಿಸಿ ಎದುರಾಳಿ ತಂಡದ ವಿರುದ್ಧ ಗೆಲುವಿಗೆ ನೆರವಾಗಿದ್ದರು.
ರೋಹಿತ್ ಶರ್ಮ ಆರು ತಿಂಗಳ ಬಿಡುವಿನ ಬಳಿಕ ಪ್ರಸ್ತುತ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಪಂದ್ಯಕ್ಕೆ ವಾಪಸಾಗಿದ್ದರು. ಆದರೆ ಈ ಸರಣಿಯಲ್ಲಿ ಪಾಲ್ಗೊಳ್ಳುತ್ತಿಲ್ಲ.
ಜಸ್‌ಪ್ರೀತ್ ಬುಮ್ರಾ ದಕ್ಷಿಣ ಆಫ್ರಿಕ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ತಂಡವನ್ನು ಸೆಮಿಫೈನಲ್ ಪ್ರವೇಶಿಸಿದ್ದರು.ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
ಭಾರತ: ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್, ರಿಷಭ್ ಪಂತ್, ಅಜಿಂಕ್ಯ ರಹಾನೆ, ಮಹೇಂದ್ರ ಸಿಂಗ್ ಧೋನಿ(ವಿಕೆಟ್ ಕೀಪರ್), ಯುವರಾಜ್ ಸಿಂಗ್, ಕೇದಾರ್ ಜಾಧವ್, ಹಾರ್ದಿಕ್ ಫಾಂಡ್ಯ, ಆರ್.ಅಶ್ವಿನ್, ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಉಮೇಶ್ ಯಾದವ್ , ಭುವನೇಶ್ವರ ಕುಮಾರ್, ಕುಲದೀಪ್ ಯಾದವ್ ಮತ್ತು ದಿನೇಶ್ ಕಾರ್ತಿಕ್
,,,,,,,,,,,,,,,,,,





