Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಂಡೋ ಸಂತ್ರಸ್ತರಿಗೆ ಆದ್ಯತೆಯಲ್ಲಿ...

ಎಂಡೋ ಸಂತ್ರಸ್ತರಿಗೆ ಆದ್ಯತೆಯಲ್ಲಿ ಸೌಲಭ್ಯಗಳ ಮಂಜೂರು: ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ15 Jun 2017 8:36 PM IST
share
ಎಂಡೋ ಸಂತ್ರಸ್ತರಿಗೆ ಆದ್ಯತೆಯಲ್ಲಿ ಸೌಲಭ್ಯಗಳ ಮಂಜೂರು: ಡಿಸಿ ಸೂಚನೆ

ಮಂಗಳೂರು, ಜೂ.15: ಎಂಡೋಸಲ್ಫಾನ್ ಸಂತ್ರಸ್ತರಿಗೆ ಮತ್ತು ಅವರ ಕುಟುಂಬದವರಿಗೆ ಸರಕಾರದಿಂದ ದೊರಕುವ ಸೌಲಭ್ಯಗಳನ್ನು ಆದ್ಯತೆಯಲ್ಲಿ ಮಂಜೂರುಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
  
ಬೆಳ್ತಂಗಡಿ ತಾಲೂಕಿನ ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದ ಕಾರ್ಯ ನಿರ್ವಾಹಕ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಸರಕಾರದ ವಿವಿಧ ಇಲಾಖೆಗಳಡಿ ಎಂಡೋ ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರು ವಿವಿಧ ಫಲಾನುಭ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಿದರೆ, ಅವರಿಗೆ ತ್ವರಿತಗತಿಯಲ್ಲಿ ಮಂಜೂರು ಮಾಡಬೇಕು. ಅಗತ್ಯ ಬಿದ್ದರೆ ನಿಯಮಗಳ ಸರಳೀಕರಣಕ್ಕೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು. ಎಂಡೋ ಸಂತ್ರಸ್ತರ ಸೌಲಭ್ಯಗಳ ಮಂಜೂರಾತಿಯಲ್ಲಿ ವಿನಾಕಾರಣ ವಿಳಂಭಿಸಿದರೆ ಕಠಿಣ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.

ಅರ್ಹ ಎಂಡೋಸಲ್ಫಾನ್ ಸಂತ್ರಸ್ತರನ್ನು ಗುರುತಿಸಲು ಅವರಿಗೆ ಗುರುತಿನ ಚೀಟಿ ಮತ್ತು ಸ್ಮಾರ್ಟ್ ಕಾರ್ಡ್ ನೀಡಿಕೆ ಕಾರ್ಯವನ್ನು ಇನ್ನಷ್ಟು ತೀವ್ರಗೊಳಿಸಬೇಕು. ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಆಗಸ್ಟ್ ಅಂತ್ಯದೊಳಗೆ ಈ ಕಾರ್ಯವನ್ನು ಪೂರ್ಣಗೊಳಿಸಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ಔಷಧಿಗಳನ್ನು ಉಚಿತವಾಗಿ ನೀಡಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ ಎಂಡೋ ಸಂತ್ರಸ್ತರು ಚಿಕಿತ್ಸೆ ಪಡೆದಿದ್ದರೆ ಆ ವೆಚ್ಚವನ್ನು ಆಸ್ಪತ್ರೆಗಳಿಗೆ ಪಾವತಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಎಂಡೋ ಸಂತ್ರಸ್ತರ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್‌ಗಳನ್ನು ನೀಡಲಾಗುವುದು. ಇದಲ್ಲದೆ ಶಿಕ್ಷಣ ಇಲಾಖೆ ವತಿಯಿಂದ ಅರ್ಹ ಎಂಡೋಪೀಡಿತ ಮಕ್ಕಳ ಮನೆಗೆ ತೆರಳಿ ವಿದ್ಯಾಭ್ಯಾಸ ನೀಡಲಾಗುವುದು. ಇದಲ್ಲದೆ ಅರ್ಹರಿಗೆ ಮನೆ ನಿವೇಶನ ನೀಡಲು ಸರಕಾರಿ ಜಾಗವನ್ನು ಗುರುತಿಸಿ ಪ್ರಸ್ತಾವನೆ ಸಲ್ಲಿಸಲು ತಹಶೀಲ್ದಾರ್‌ಗಳಿಗೆ ಸೂಚಿಸಿದ ಅವರು, ವಸತಿ ಯೋಜನೆಯಡಿ ಮನೆ ನಿರ್ಮಾಣ ಹಾಗೂ ಶೌಚಾಲಯಗಳನ್ನು ಆಯಾ ಗ್ರಾಪಂಗಳು ಆದ್ಯತೆಯಲ್ಲಿ ನೀಡಲು ಹೇಳಿದರು.

ಎಂಡೋ ಸಂತ್ರಸ್ತರ ಬ್ಯಾಂಕ್ ಖಾತೆಗೆ ಮಾಸಿಕ ಪಿಂಚಣಿ ಜಮಾ ಆಗುವುದರಲ್ಲಿ ವಿಳಂಬವಾಗುವುದುನ್ನು ತಪ್ಪಿಸಲು ಮಂಗಳೂರಿನಲ್ಲಿ ಖಜಾನೆ ಮತ್ತು ವಿವಿಧ ಬ್ಯಾಂಕುಗಳ ಸಭೆ ನಡೆಸಲಾಗುವುದು. ಹಳೆ ಪಿಂಚಣಿ ಬಾಕಿ ಇದ್ದವರಿಗೆ ಈಗಾಗಲೇ ಬಾಕಿ ಪಾವತಿಸಲಾಗಿದೆ. ಅರ್ಹರಿಗೆ ಪಿಂಚಣಿ ದೊರಕಿಸುವುದು ಸರಕಾರದ ಉದ್ದೇಶವಾಗಿದೆ. ಅನರ್ಹರಿಗೆ ಎಂಡೋಸಲ್ಫಾನ್ ಸಂತ್ರಸ್ತರ ಪಿಂಚಣಿ ಮಂಜೂರಾಗಿರುವ ಬಗ್ಗೆ ದೂರುಗಳು ಬಂದರೆ ಅಂತಹ ಪಿಂಚಣಿಯನ್ನು ತಡೆ ಹಿಡಿಯಲು ಜಿಲ್ಲಾಧಿಕಾರಿಗಳು ಸೂಚಿಸಿದರು.

ಪ್ರಸ್ತುತ ಇರುವ ‘ಡೇ ಕೇರ್ ಸೆಂಟರ್’ಗಳಲ್ಲಿ ಪೂರ್ಣ ಪ್ರಮಾಣದ ಫಿಸಿಯೋಥೆರಫಿ ಘಟಕಗಳನ್ನು ವಾರದ 6 ದಿನಗಳಲ್ಲೂ ಕಾರ್ಯಾಚರಿಸಲಾಗುವುದು. ಡೇ ಕೇರ್ ಸೆಂಟರ್‌ಗಳ ಉಸ್ತುವಾರಿಗೆ ಸಮಿತಿಯನ್ನು ರಚಿಸಲಾಗುವುದು. ಎಂಡೋಸಲ್ಫಾನ್ ಸಂತ್ರಸ್ತರ ಬೇಡಿಕೆಗಳ ಬಗ್ಗೆ ಉನ್ನತ ಮಟ್ಟದ ಸಭೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ಶೀಘ್ರ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ದ.ಕ.ಜಿಪಂ ಸಿಇಒ ಡಾ.ಎಂ.ಆರ್.ರವಿ, ಪುತ್ತೂರು ಎಸಿ ಡಾ.ರಘುನಂದನ ಮೂರ್ತಿ, ಮಂಗಳೂರು ಎಸಿ ರೇಣುಕಾ ಪ್ರಸಾದ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ಡಾ. ಅರುಣ್‌ಕುಮಾರ್, ಕೊಕ್ಕಡ ಗ್ರಾಪಂ ಅಧ್ಯಕ್ಷ ಸೆಬಾಸ್ಟಿಯನ್, ಎಂಡೋ ಹೋರಾಟಗಾರರ ಸಮಿತಿಯ ಪೀರ್ ಮುಹಮ್ಮದ್ ಸಾಹೇಬ್, ಎಂಡೋ ಸಂತ್ರಸ್ತ ಕುಟುಂಬಗಳ ಸದಸ್ಯರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X