ಸಂತೆಕಟ್ಟೆ: ವಾರದ ಸಂತೆ ರದ್ದು
ಉಡುಪಿ,ಜೂ.15: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶ್ರೀಕೃಷ್ಣಮಠದಲ್ಲಿ ಕಾರ್ಯಕ್ರಮವನ್ನು ಮುಗಿಸಿಕೊಂಡು ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಲಿದ್ದು, ಇದಕ್ಕಾಗಿ ರಾ.ಹೆದ್ದಾರಿ 66ರಲ್ಲಿ ಸಂಚರಿಸಲಿರುವುದರಿಂದ ಉಡುಪಿ ನಗರಸಭಾ ವ್ಯಾಪ್ತಿಯ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ನಡೆಯುವ ವಾರದ ಸಂತೆಯನ್ನು ಮುಂಜಾಗ್ರತೆ ಹಾಗೂ ರಕ್ಷಣೆಯ ದೃಷ್ಟಿಯಿಂದ ರದ್ದುಪಡಿಸಲಾಗಿದೆ.
ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Next Story





