ಸ್ವಯಂ ಉದ್ಯೋಗಕ್ಕೆ ಸಾಲ: ಅರ್ಜಿ ಆಹ್ವಾನ
ಮಂಗಳೂರು, ಜೂ.15: ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ನಿರುದ್ಯೋಗಿ ಯುವಕ/ ಯುವತಿಯರಿಂದ ಕೈಗಾರಿಕೆ ಹಾಗೂ ಸೇವಾ ವಲಯದ ಉದ್ದಿಮೆಗಳನ್ನು ಗ್ರಾಮಾಂತರ ಪ್ರದೇಶದಲ್ಲಿ ಪ್ರಾರಂಭಿಸಲು ಬ್ಯಾಂಕಿನ ಆರ್ಥಿಕ ನೆರವು/ಸರಕಾರದ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಕೊನೆಯ ದಿನವನ್ನು ಜುಲೈ 3ರವರೆಗೆ ವಿಸ್ತರಿಸಲಾಗಿದೆ.
ಈ ಯೋಜನೆಯನ್ನು ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಯೆಯ್ಯಾಡಿ, ಮಂಗಳೂರು ಹಾಗೂ ಜಿಲ್ಲಾ ಅಧಿಕಾರಿಗಳು, ಖಾದಿ ಗ್ರಾಮೋದ್ಯೋಗ ಮಂಡಳಿ, ಲಾಲ್‌ಬಾಗ್, ಮಹಾ ನಗರಪಾಲಿಕೆ ಕಟ್ಟಡ, ಮಂಗಳೂರು ಮೂಲಕ ಅನುಷ್ಟಾನಗೊಳಿಸಲಾಗುತ್ತಿದೆ. ಮಾಹಿತಿಗಾಗಿ ದೂ.ಸಂ: 0824-2212494, 2214021ನ್ನು ಸಂರ್ಪಕಿಸಲು ಪ್ರಕಟನೆ ತಿಳಿಸಿದೆ.
Next Story





