ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ
ಬೆಂಗಳೂರು, ಜೂ.15: ಐದು ಎಕರೆ ಜಮೀನಿನ ಭೂ ಪರಿವರ್ತನೆಗಾಗಿ ಅನುಮತಿ ನೀಡಲು 25ಸಾವಿರ ರೂ. ಲಂಚ ಪಡೆಯುತ್ತಿದ್ದ ಕರ್ನಾಟಕ ಗೃಹ ಮಂಡಳಿಯ ವಿಶೇಷ ಭೂ ಸ್ವಾಧೀನ ಅಧಿಕಾರಿ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಶಿವಸ್ವಾಮಿ ಮತ್ತು ಭೂ ಮಾಪಕ ಬಸವರಾಜು ಎಸಿಬಿ ಬಲೆಗೆ ಬಿದ್ದಿದ್ದಾರೆ.
ನಗರದ ಹುಳಿಮಾವು ನಿವಾಸಿಯೊಬ್ಬರು ಅನೇಕಲ್ ತಾಲೂಕಿನಲ್ಲಿರುವ 5 ಎಕರೆ ಜಮೀನಿನ ಭೂ ಪರಿವರ್ತನೆಗಾಗಿ ಅನುಮತಿ ಕೋರಿ ಜಿಲ್ಲಾಧಿಕಾರಿ ಹಾಗೂ ನಗರ ಜಿಲ್ಲಾ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಆರೋಪಿಗಳು ಭೂ ಪರಿವರ್ತನೆಗಾಗಿ 25 ಸಾವಿರ ರೂ. ಲಂಚ ಕೇಳಿದ್ದು, ಜೂ.14ರಂದು ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.
Next Story





