Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾರ್ವಜನಿಕರು ಎಚ್ಚೆತ್ತುಕೊಂಡಾಗ ಬಾಲ್ಯ...

ಸಾರ್ವಜನಿಕರು ಎಚ್ಚೆತ್ತುಕೊಂಡಾಗ ಬಾಲ್ಯ ವಿವಾಹ ತಡೆಯಲು ಸಾಧ್ಯ: ನ್ಯಾ. ಎಮ್.ರಾಮಚಂದ್ರ

ವಾರ್ತಾಭಾರತಿವಾರ್ತಾಭಾರತಿ16 Jun 2017 6:09 PM IST
share
ಸಾರ್ವಜನಿಕರು ಎಚ್ಚೆತ್ತುಕೊಂಡಾಗ ಬಾಲ್ಯ ವಿವಾಹ ತಡೆಯಲು ಸಾಧ್ಯ: ನ್ಯಾ. ಎಮ್.ರಾಮಚಂದ್ರ

ಪುತ್ತೂರು,ಜು.16: ಬಾಲ್ಯ ವಿವಾಹ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತೆ ಸರಕಾರದ ಇಲಾಖೆಗಳು ಜಾಗೃತಿ ಮಾತ್ರ ಮೂಡಿಸಬಹುದು. ಆದರೆ ಸಾರ್ವಜನಿಕರು ಎಚ್ಚೆತ್ತುಕೊಂಡಾಗ ಬಾಲ್ಯ ವಿವಾಹ ತಡೆಯಲು ಸಾಧ್ಯ ಎಂದು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ  ನ್ಯಾಯಾಧೀಶ ಎಮ್.ರಾಮಚಂದ್ರ ಹೇಳಿದರು.

ಜಿಲ್ಲಾ ಮತ್ತು ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯವಾದಿಗಳ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನೆಹರುನಗರ ಸುದಾನ ವಸತಿಯುತ ಶಾಲೆಯಲ್ಲಿ ನಡೆದ ಬಾಲ್ಯ ವಿವಾಹ ಜಾಗೃತಿ ಮತ್ತು ಶಾಲೆ ಕಡೆ ನನ್ನ ನಡೆ ಕುರಿತು ಜಾಗೃತಿ ಆಂದೋಲನ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಕಾನೂನಾತ್ಮಕ ದೃಷ್ಟಿಯಲ್ಲಿ ಮದುವೆ ಮಾಡಲು ಹುಡುಗಿಗೆ 18, ಹುಡುಗನಿಗೆ 21 ವರ್ಷ ವಯಸ್ಸಾಗಿರಬೇಕು. ಬಡತನ, ಅನಕ್ಷರತೆ, ಸಂಪ್ರದಾಯ, ಆರ್ಥಿಕ ಹಿನ್ನಡೆಯಿಂದಾಗಿ ಬಾಲ್ಯವಿವಾಹದ ಅನಿಷ್ಠ ಪದ್ಧತಿ ಬೆಳೆದು ಬಂದಿದೆ. ಇಂದಿಗೂ ಕೆಲವು ಕಡೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಬಾಲ್ಯವಿವಾಹಕ್ಕೆ ಪ್ರಚೋದನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಸಮುದಾಯ ಭವನ, ಮದುವೆ ಹಾಲ್‌ನಲ್ಲಿ ಬಾಲ್ಯವಿವಾಹ ಮಾಡದಂತೆ ಫಲಕ ಹಾಕಬೇಕು. ಮದುವೆ ದಿನಾಂಕ ನಿಶ್ಚಯ ಮಾಡುವ ಅರ್ಚಕರು ಬಾಲ್ಯವಿವಾಹದ ಕುರಿತು ಜಾಗೃತಿ ವಹಿಸಬೇಕು. ಸಾರ್ವಜನಿಕರು ಕೈ ಜೋಡಿಸಿದಾಗ ಬಾಲ್ಯವಿವಾಹ ಪಿಡುಗನ್ನು ಸಮಾಜದಿಂದ ತೊಡೆದು ಹಾಕಬಹುದು ಎಂದರು.

ವಕೀಲರ ಸಂಘದ ಅಧ್ಯಕ್ಷ ಭಾಸ್ಕರ್ ಕೋಡಿಂಬಾಳ ಮಾತನಾಡಿ ಮೌಲ್ಯಾಧರಿತ ಶಿಕ್ಷಣದಲ್ಲಿ ಮಾನಾವೀಯ ಮೌಲ್ಯ ಬೇಕಾಗಿದೆ. ಈ ನಿಟ್ಟಿನಲ್ಲಿ ದೇಶಕ್ಕೆ ಪೂರಕವಾದ ಕೆಲಸ ಶಿಕ್ಷಣ ಉದೇಶವಾಗಿರಬೇಕು. ಶಿಕ್ಷಣವನ್ನು ತಳಸ್ಪರ್ಶದಿಂದ ಅಳೆಯಬೇಕು. ನಾನು ಬದಲಾವಣೆ ಆದಾಗ ಸಮಾಜದ ಬದಲಾವಣೆಯನ್ನು ಕಾಣಲು ಸಾಧ್ಯ ಎಂಬ ಭಾವನೆ ನಮ್ಮಲ್ಲಿರಬೇಕೆಂದು ಹೇಳಿದರು.


ಸುದಾನ ವಸತಿಯುತ ಶಾಲೆಯ ಸಂಚಾಲಕ ರೆ. ವಿಜಯ ಹಾರ್ವಿನ್ ಮಾತನಾಡಿ, ಕಾನೂನು ಸುವ್ಯವಸ್ಥೆಯಲ್ಲಿ ಜಾಗೃತಿಗೆ ಸಂಬಂಧಿಸಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಸಮಾಜದಲ್ಲಿರುವ ಕೇಡುಗಳನ್ನು ಆರೋಗ್ಯದ ದೃಷ್ಟಿಯಿಂದ ಸಾಮಾಜಿಕ ಸುವಸ್ಥೆಗಾಗಿ ಮಾಡುವ ಕಾರ್ಯಕ್ರಮವನ್ನು ದೇವರು ಮೆಚ್ಚುತ್ತಾರೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ನ್ಯಾಯವಾದಿ ಹರೀಶ್ ಬಳಕ್ಕ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಕಸ್ತೂರಿ ಬೊಳುವಾರು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ ಮತ್ತು ಹೆಚ್ಚುವರಿ ಸಿವಿಲ್ ಮುಖ್ಯ ನ್ಯಾಯಿತ ದಂಡಾಧಿಕಾರಿ ಸಿ.ಕೆ.ಬಸವರಾಜ್, ಹೆಚ್ಚುವರಿ ಹಿರಿಯ ವ್ಯವಹಾರಿಕ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಮಂಜುನಾಥ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಮಹೇಶ್ ಕಜೆ, ಎನ್.ಎಸ್ ಮಂಜುನಾಥ್, ಉದಯಶಂಕರ್ ಶೆಟ್ಟಿ, ವಕೀಲರ ಸಂಘದ ಕಾರ್ಯದರ್ಶಿ ಕೃಷ್ಣಪ್ರಸಾದ್ ರೈ, ಉಪಾಧ್ಯಕ್ಷ ಮಹಾಬಲ ಗೌಡ, ಜೊತೆಕಾರ್ಯದರ್ಶಿ ದೀಪಕ್ ಬೊಳುವಾರು, ಖಜಾಂಚಿ ಕುಮಾರನಾಥ ಎಸ್, ಮಕ್ಕಳ ರಕ್ಷಣಾ ಘಟಕದ ವಕೀಲ ವಝೀರ್ ಅಹಮ್ಮದ್, ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ ಉಪಸ್ಥಿತರಿದ್ದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಿ ಟಿ ಹೆಗಡೆ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ.ಎಸ್ ವಂದಿಸಿದರು. ಬೊಳುವಾರು ಸಾಂಸ್ಕೃತಿಕ ಕಲಾ ಕೇಂದ್ರದ ಅಧ್ಯಕ್ಷ ಚಿದಾನಂದ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X