ಪರಿಸರ ಸಂರಕ್ಷಣೆ -ತ್ಯಾಜ್ಯ ವಿಲೇವಾರಿ ಕಾರ್ಯಾಗಾರ

ಉಡುಪಿ, ಜೂ.16: ಹೂಡೆ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಇಕೋ ಕ್ಲಬ್ ವತಿಯಿಂದ ಪರಿಸರ ಸಂರಕ್ಷಣೆ ಮತ್ತು ತ್ಯಾಜ್ಯ ವಿಲೇವಾರಿ ಕುರಿತ ಕಾರ್ಯಾಗಾರವನ್ನು ಇತ್ತೀಚೆ ಶಾಲೆಯಲ್ಲಿ ಹಮ್ಮಿಕೊಳ್ಳ ಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ತರಬೇತುದಾರ ಜೋಸೆಫ್ ಜಿ.ಎಂ.ರೆಬೆಲ್ಲೊ ವಿವಿಧ ರೀತಿಯ ತ್ಯಾಜ್ಯ ಮತ್ತು ಅವುಗಳಿಂದ ಪರಿಸರಕ್ಕೆ ಆಗುವ ದುಷ್ಪರಿಣಾಮಕಾರಿಗಳ ಬಗ್ಗೆ ಮಾಹಿತಿ ನೀಡಿದರು. ತ್ಯಾಜ್ಯ ವಿಲೇವಾರಿಯ ಬಗ್ಗೆಯೂ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.
ಶಾಲಾ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ ಉಪಸ್ಥಿತರಿದ್ದರು. ಮುಖ್ಯೋಪಾ ಧ್ಯಾಯಿನಿ ಸುನಂದ ಕಾರ್ಯಕ್ರಮ ನಿರೂಪಿಸಿದರು.
Next Story





