Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರ್ಟಿಫಿಕೇಟ್ ನೀಡುವ ಮೊದಲ ಜ್ಯುವೆಲ್ಲರಿ...

ಸರ್ಟಿಫಿಕೇಟ್ ನೀಡುವ ಮೊದಲ ಜ್ಯುವೆಲ್ಲರಿ ತರಬೇತಿ ಸಂಸ್ಥೆ: ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ16 Jun 2017 8:09 PM IST
share
ಸರ್ಟಿಫಿಕೇಟ್ ನೀಡುವ ಮೊದಲ ಜ್ಯುವೆಲ್ಲರಿ ತರಬೇತಿ ಸಂಸ್ಥೆ: ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ

ಉಡುಪಿ, ಜೂ.16: ದೇಶದ ಮೊತ್ತಮೊದಲ ಸರ್ಟಿಫಿಕೇಟ್ ನೀಡುವ ರತ್ನ ಮತ್ತು ಚಿನ್ನಾಭರಣ ತರಬೇತಿ ಸಂಸ್ಥೆಗೆ ಕೇಂದ್ರ ಸರಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯಲ್ಲಿ ಇಂದು ಶಂಕುಸ್ಥಾಪನೆ ನೆರವೇರಿಸಿದರು.

ಚಿನ್ನಾಭರಣ ತಯಾರಿಗೆ ತರಬೇತಿ ನೀಡುವ ಸಂಸ್ಥೆಗಳು ಉತ್ತರ ಭಾರತದ ಮುಂಬಯಿ, ಸೂರತ್, ಜೈಪುರ, ದಿಲ್ಲಿ ಹಾಗೂ ವಾರಣಸಿಗಳಲ್ಲಿ ಈಗಾಗಲೇ ಕಾರ್ಯಾಚರಿಸುತಿದ್ದರೂ ಅವು ಯಾವುದೂ ತರಬೇತಿಗೆ ಸರ್ಟಿಫಿಕೇಟ್‌ಗಳನ್ನು ನೀಡುತ್ತಿಲ್ಲ. ಆದರೆ ಉಡುಪಿಯಲ್ಲಿ ಅಹಮದಾಬಾದ್‌ನ ನೇಷನಲ್ ಇನ್‌ಸ್ಟಿಟೂಟ್ ಆಫ್ ಡಿಸೈನ್ (ಎನ್‌ಐಡಿ) ಸಹಭಾಗಿತ್ವದಲ್ಲಿ ನಡೆಯುವ ಈ ಸಂಸ್ಥೆ ತನ್ನಲ್ಲಿ ತರಬೇತಿ ಪಡೆದವರಿಗೆ ಸರ್ಟಿಫಿಕೇಟ್‌ಗಳನ್ನು ನೀಡಲಿದ್ದು, ಇದರಿಂದ ಅವರು ತಕ್ಷಣವೇ ದೇಶದ ಯಾವುದೇ ಭಾಗದಲ್ಲಿ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ ಎಂದು ಸಚಿವೆ ನುಡಿದರು.

ಸದ್ಯಕ್ಕೆ ಬಾಡಿಗೆಯ ಕಟ್ಟಡದಲ್ಲಿ ಈ ಸಂಸ್ಥೆ ಮುಂದಿನ ನವೆಂಬರ್ ತಿಂಗಳಿನಿಂದ ಕಾರ್ಯಾರಂಭ ಮಾಡಲಿದೆ. ಈಗ ಅಲ್ಲಿ 10 ಹಾಗೂ 9 ವಾರಗಳ ಒಟ್ಟು ನಾಲ್ಕು ಕೋರ್ಸ್‌ಗಳಿರುತ್ತವೆ. ದೇಶದ ತಜ್ಞರು ಇಲ್ಲಿ ತರಬೇತಿಗಳನ್ನು ನೀಡಲಿದ್ದು, ಕಾರ್ಯಾಗಾರಗಳನ್ನೂ ನಡೆಸಲಾಗುತ್ತದೆ ಎಂದರು.

ಮೊದಲ ಹಂತದಲ್ಲಿ ಚಿನ್ನಾಭರಣ ತಯಾರಿಕೆಗೆ ತರಬೇತಿ ನೀಡಿದರೆ, ಎರಡನೇ ಹಂತದಲ್ಲಿ ಚಿನ್ನಾಭರಣಗಳನ್ನು ಇಲ್ಲೇ ತಯಾರಿಸಲಾಗುವುದು. ಮೂರನೇ ಹಂತದಲ್ಲಿ ಇಲ್ಲಿ ತಯಾರಾದ ಉತ್ಕೃಷ್ಟ ಗುಣಮಟ್ಟದ, ವಿನ್ಯಾಸದ ಚಿನ್ನಾಭರಣಗಳನ್ನು ವಿದೇಶಗಳಿಗೂ ರಫ್ತು ಮಾಡಲಾಗುವುದು ಎಂದು ಸಚಿವೆ ವಿವರಿಸಿದರು.

ಎಸೆಸೆಲ್ಸಿ ಹಾಗೂ ಪಿಯುಸಿ ತೇರ್ಗಡೆಗೊಂಡ ಚಿನ್ನಾಭರಣ ತಯಾರಿಯಲ್ಲಿ ಆಸಕ್ತಿ ಹೊಂದಿರುವ ಯುವಕ-ಯುವತಿಯರು, ಸಾಂಪ್ರದಾಯಿಕ ಚಿನ್ನದ ಕೆಲಸಗಾರರು, ಈಗಾಗಲೇ ಈ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರು ಈ ತರಬೇತಿ ಪಡೆಯಬಹುದಾಗಿದೆ. ಎನ್‌ಐಡಿ ನೀಡುವ ಸರ್ಟಿಫಿಕೇಟ್ ಪಡೆದ ತರಬೇತುದಾರನಿಗೆ ತಕ್ಷಣ ಉದ್ಯೋಗವೂ ಖಾತ್ರಿಯಾಗಿರುತ್ತದೆ ಎಂದವರು ಭರವಸೆ ನೀಡಿದರು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಚಿನ್ನಾಭರಣ ತಯಾರಿಯಲ್ಲಿ ಅತ್ಯಂತ ನಿಪುಣ ಕುಶಲಕರ್ಮಿಗಳನ್ನು ಹೊಂದಿದ್ದು, ಈ ತರಬೇತಿ ಸಂಸ್ಥೆಯ ಮೂಲಕ ಅವರು ತಮ್ಮ ಸಾಂಪ್ರದಾಯಿಕ ಜ್ಞಾನವನ್ನು ಆಧುನೀಕರಣಗೊಳಿಸಿ ಜಾಗತಿಕ ಮಟ್ಟದ ಚಿನ್ನಾಭರಣಗಳನ್ನು ತಯಾರಿಸುವ ಸಾಮರ್ಥ್ಯ ಪಡೆಯುವ ವಿಶ್ವಾಸ ತಮಗಿದೆ. ಈ ಸಂಸ್ಥೆಯಿಂದ ಇಲ್ಲಿನ ಕುಶಲಕರ್ಮಿಗಳಿಗೆ ಉದ್ಯೋಗದ ಸುವರ್ಣ ಬಾಗಿಲು ತೆರೆಯಲಿದೆ ಎಂದು ತಾವು ಭಾವಿಸುವುದಾಗಿ ನುಡಿದರು.

ಸಮಾರಂಭದಲ್ಲಿ ಉಡುಪಿ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ, ಜಿಜೆಇಪಿಸಿಯ ಅಧ್ಯಕ್ಷ ಪ್ರವೀಣ್‌ಶಂಕರ್ ಪಾಂಡ್ಯ, ಸಂಯೋಜಕ ಕೆ.ಶ್ರೀನಿವಾಸನ್, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಜಂಟಿ ನಿರ್ದೇಶಕ ಮನೋಜ್ ದ್ವಿವೇದಿ, ಉಡುಪಿ ಜ್ಯುವೆಲ್ಲರಿ ಅಸೋಸಿಯೇಷನ್ ಅಧ್ಯಕ್ಷ ಎ.ನಾಗರಾಜ ಆಚಾರ್ಯ, ಸಂಸ್ಥೆಯ ದಕ್ಷಿಣ ಭಾರತ ಅಧ್ಯಕ್ಷ ಮಹೇಂದರ್ ತಯಾಲ್ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಉಡುಪಿ ಜಿಲ್ಲೆಯ ಪ್ರಮುಖ ಆಭರಣ ತಯಾರಕರು ಹಾಗೂ ಮಾರಾಟಗಾರರಾದ ಜಯ ಎ.ಸುವರ್ಣ, ನಾಗರಾಜ ಆಚಾರ್ಯ, ರಾಜಶೇಖರ ಆಚಾರ್ಯ, ಸುಂದರ ಆಚಾರ್ಯ, ಗುಜ್ಜಾಡಿ ರಾಮದಾಸ ನಾಯಕ್, ಸುಭಾಸ್ ಕಾಮತ್ ಮುಂತಾದವರನ್ನು ಸಚಿವರು ಸನ್ಮಾನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X