ಹೋಬಳಿ ಮಟ್ಟದ ಸಮಗ್ರ ಕೃಷಿ ಅಭಿಯಾನ
ಉಡುಪಿ, ಜೂ.16: ಉಡುಪಿ ಜಿಲ್ಲಾ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳು ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ತಾಲೂಕು ಇವರ ಸಹಯೋಗದಲ್ಲಿ ಬ್ರಹ್ಮಾವರ ಹೋಬಳಿ ಮಟ್ಟದ ಸಮಗ್ರ ಕೃಷಿ ಅಭಿಯಾನ ‘ಮಳೆಯಾಶ್ರಿತ ರೈತರಿಗೆ ವರದಾನ’ 'ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ' ಕಾರ್ಯಕ್ರಮವು ಜೂ.24ರಂದು ಬೆಳಗ್ಗೆ 10:30ಕ್ಕೆ ಚೇರ್ಕಾಡಿ ಮುಂಡ್ಕಿನಜಡ್ಡು ಆರ್.ಕೆ.ಪಾಟ್ಕರ್ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಚೇರ್ಕಾಡಿ ಗ್ರಾಪಂ ಅಧ್ಯಕ್ಷ ಹರೀಶ್ ಶೆಟ್ಟಿ ವಹಿಸಲಿದ್ದಾರೆ.
ಕೋಟ ಹೋಬಳಿ: ಕೋಟ ಹೋಬಳಿ ಮಟ್ಟದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಜೂ.26ರಂದು ಬೆಳಗ್ಗೆ 10:30ಕ್ಕೆ ಸಾಸ್ತಾನ ಶಿವಕೃಪಾ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಐರೋಡಿ ಗ್ರಾಪಂ ಅಧ್ಯಕ್ಷ ಮೋಸೆಸ್ ರಾಡ್ರಿಗಸ್ ವಹಿಸಲಿದ್ದಾರೆ.
ಕಾಪು ಹೋಬಳಿ: ಕಾಪು ಹೋಬಳಿ ಮಟ್ಟದ ಸಮಗ್ರ ಕೃಷಿ ಅಭಿಯಾನ ‘ಜಲಜಾಗೃತಿ ವರ್ಷ, ಕೃಷಿ ಭಾಗ್ಯ’ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಕಾರ್ಯಕ್ರಮ ಜೂ.29ರಂದು ಬೆಳಗ್ಗೆ 10:30ಕ್ಕೆ ಶಿರ್ವ ಸಾವುದ್ ಸಭಾಭವನ ದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕಾಪು ಶಾಸಕ ವಿನಯಕುಮಾರ್ ಸೊರಕೆ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಿರ್ವ ಗ್ರಾಪಂ ಅಧ್ಯಕ್ಷೆ ವಾರಿಜ ಪೂಜಾರ್ತಿ ವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.







