ಆಗಸ್ಟ್‌ನಲ್ಲಿ ಇಂದಿರಾ ಕ್ಯಾಂಟಿನ್: ಯು.ಟಿ.ಖಾದರ್
ಬೆಂಗಳೂರು, ಜೂ.16: ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಂದಿನ ಆಗಸ್ಟ್ ಒಳಗೆ ಇಂದಿರಾ ಕ್ಯಾಂಟಿನ್ ಪ್ರಾರಂಭವಾಗಲಿದ್ದು, ಇದಕ್ಕೆ ಅಗತ್ಯವಾದ ಪೂರ್ವ ಸಿದ್ಧತಾಕಾರ್ಯ ನಡೆಯುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಶುಕ್ರವಾರ ವಿಕಾಸಸೌಧದಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ 24 ವಿಧಾನಸಭಾ ಕ್ಷೇತ್ರಗಳಿದ್ದು, ಪ್ರತಿ ಕ್ಷೇತ್ರದಲ್ಲಿ 7ರಿಂದ 8 ಇಂದಿರಾ ಕ್ಯಾಂಟಿನ್ ಸ್ಥಾಪಿಸಲು ಚಿಂತನೆ ನಡೆಸಲಾಗುತ್ತಿದೆ. ಅಲ್ಲದೇ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲೊಂದು ಅಡುಗೆ ಮನೆಯಿದ್ದು, ತಮ್ಮ ಕ್ಷೇತ್ರದಲ್ಲಿರುವ ಕ್ಯಾಂಟಿನ್‌ಗಳಿಗೆ ಆಹಾರ ಸರಬರಾಜು ಮಾಡಲಾಗುತ್ತದೆ ಎಂದು ತಿಳಿಸಿದರು.
ಸರಕಾರದ ಜಾಗದಲ್ಲಿಯೇ ಇಂದಿರಾ ಕ್ಯಾಂಟಿನ್‌ಗಳನ್ನು ಸ್ಥಾಪಿಸಲಾಗುವುದು. ಹಾಗೂ ವಿದ್ಯುತ್ ಹಾಗೂ ನೀರಿನ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಉಳಿದಂತೆ ಅಡುಗೆ ತಯಾರಿಕೆ ಹಾಗೂ ಸರಬರಾಜು ಮಾಡಲು ಗುತ್ತಿಗೆಗೆ ನೀಡಲಾಗುತ್ತದೆ. ಮಹಿಳಾ ಸ್ವಸಹಾಯ ಸಂಘಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆಸಕ್ತರು ಬಿಬಿಎಂಪಿಯಲ್ಲಿ ಅರ್ಜಿ ಪಡೆದು ನೋಂದಣಿ ಮಾಡಿಕೊಳ್ಳಬಹು. ತದನಂತರ ಸರಕಾರ ಯೋಗ್ಯ ಗುತ್ತಿಗೆದಾರರನ್ನು ಗುರುತಿಸಲಿದೆ ಎಂದು ಅವರು ಹೇಳಿದರು.