ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎ.ಎಲ್. ಪುಷ್ವ ಲಕ್ಷ್ಮಣಸ್ವಾಮಿ ನೇಮಕ
ದಾವಣಗೆರೆ,ಜೂ.17: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಹಿಳಾ ಘಟಕ ಅಧ್ಯಕ್ಷೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಅವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎ.ಎಲ್. ಪುಷ್ವ ಲಕ್ಷ್ಮಣಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ರೇಷ್ಮೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಡಿ. ಬಸವರಾಜ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎ.ಎಲ್. ಪುಷ್ವ ಲಕ್ಷ್ಮಣಸ್ವಾಮಿ ಆಯ್ಕೆಯಾಗಿದ್ದು, 6 ಜಿಲ್ಲೆಗಳ ಉಸ್ತುವಾರಿಯನ್ನು ನೀಡಲಾಗಿದೆ ಎಂದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವುದಕ್ಕೆ ಮಹಿಳೆಯನ್ನು ನೇಮಕ ಮಾಡಿದ್ದು, ಮುಂದಿನ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.
Next Story





