‘ನಮ್ಮ ಮೆಟ್ರೋ’ ಲೋಕಾರ್ಪಣೆ...!
ಬೆಂಗಳೂರಿನ ಸಂಪಿಗೆ ರಸ್ತೆಯಿಂದ ಕನಕಪುರ ರಸ್ತೆಯಲ್ಲಿನ ಯಲಚೇನಹಳ್ಳಿವರೆಗಿನ ‘ಹಸಿರು’ ಮಾರ್ಗದ ಮೊದಲ ಹಂತದ ನಮ್ಮ ಮೆಟ್ರೋ ರೈಲು ಸಂಚಾರಕ್ಕೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಲೋಕಾರ್ಪಣೆ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ವೆಂಕಯ್ಯನಾಯ್ಡು, ಅನಂತಕುಮಾರ್, ಡಿ.ವಿ.ಸದಾನಂದಗೌಡ, ಬೆಂ.ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವ ಆರ್. ರೋಶನ್ ಬೇಗ್, ಸಭಾಪತಿ ಶಂಕರಮೂರ್ತಿ, ಸ್ಪೀಕರ್ ಕೆ.ಬಿ.ಕೋಳಿವಾಡ, ಜಪಾನ್ ರಾಯಭಾರಿ ಕೆಂಜಿ ಹಿರಮಟ್ಟು, ಸಂಸದರಾದ ಕೆ.ರೆಹ್ಮಾನ್‌ಖಾನ್, ಪಿ.ಸಿ.ಮೋಹನ್, ಡಿ.ಕೆ.ಸುರೇಶ್, ಪ್ರೊ.ರಾಜೀವ್ ಗೌಡ, ಕೆ.ಸಿ. ರಾಮಮೂರ್ತಿ, ಬಿಬಿಎಂಪಿ ಮೇಯರ್ ಪದ್ಮಾವತಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಸುಭಾಶ್ಚಂದ್ರ ಕುಂಟಿಯಾ, ಬಿಎಂಆರ್‌ಸಿಎಲ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





