ಗಣ್ಯರಿಂದ ರಾಷ್ಟ್ರಪತಿಗೆ ಸ್ವಾಗತ

ಮಂಗಳೂರು, ಜೂ.18: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಉಡುಪಿಗೆ ತೆರಳಲು ರವಿವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಭವ್ಯವಾಗಿ ಸ್ವಾಗತಿಸಲಾಯಿತು.
ಭಾರತೀಯ ವಾಯುಪಡೆಯ ವಿಮಾನದಲ್ಲಿ ಆಗಮಿಸಿದ ರಾಷ್ಟ್ರಪತಿಯವರನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೂಗುಚ್ಛ ನೀಡಿ ಸ್ವಾಗತಿಸಿದರು.
ಈ ಸಂದರ್ಭ ಸಚಿವ ಯು.ಟಿ.ಖಾದರ್, ಮೇಯರ್ ಕವಿತಾ ಸನಿಲ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್, ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಕೂಡ ರಾಷ್ಟ್ರಪತಿಯವನ್ನು ಬರಮಾಡಿಕೊಂಡರು.
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ರಾಷ್ಟ್ರಪತಿಗಳೊಂದಿಗೆ ವಿಮಾನದಲ್ಲಿ ಆಗಮಿಸಿದರು.
ರಾಷ್ಟ್ರಪತಿಗಳು ಬಳಿಕ ವಾಯುಪಡೆ ಹೆಲಿಕಾಪ್ಟರ್‌ನಲ್ಲಿ ಉಡುಪಿಗೆ ತೆರಳಿದರು. ರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸುತ್ತಮುತ್ತ ಹಾಗೂ ಮಂಗಳೂರಿನಿಂದ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯುದ್ದಕ್ಕೂ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.
Next Story





