ಡಿ.ಗೂಫ್ ಹುದ್ದೆಗಳ ನೇಮಕಾತಿ: ದಾಖಲಾತಿ ಪರಿಶೀಲನೆ, ಪ್ರಾಯೋಗಿಕ ಪರೀಕ್ಷೆ
ಶಿವಮೊಗ್ಗ,ಜೂ.18: ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಗ್ರೂಫ್ ಡಿ. ವೃಂದದ ಅಡುಗೆಯವರು-86ಹುದ್ದೆ ಹಾಗೂ ಸಹಾಯಕರು-92 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉದ್ದೇಶಿಸಿದ್ದು, ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶಿವಮೊಗ್ಗ ನಗರದ ಟ್ಯಾಂಕ್ ಮೊಹಲ್ಲಾದಲ್ಲಿರುವ ಬನಶಂಕರಿ ದೇವಸ್ಥಾನದ ಪಕ್ಕದ ದೇವಾಂಗ ಸಮುದಾಯ ಭವನದಲ್ಲಿ ದಾಖಲಾತಿಗಳ ಪರಿಶೀಲನೆ ನಡೆಯಲಿದೆ.
ಜೂನ್ 22ರಂದು ಅಡಿಗೆಯವರ ಹುದ್ದೆಗೆ ಹಾಗೂ 23ರಂದು ಅಡುಗೆ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ ನಡೆಯಲಿದೆ. ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆಗಳು ಜೂನ್ 28ರಂದು ಅಡುಗೆಯವರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹಾಗೂ ಜೂನ್ 29ರಂದು ಅಡುಗೆ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನಡೆಯಲಿವೆ.
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಹಾಗೂ ಮೀಸಲಾತಿಯನ್ವಯ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ನೇರ ಸಂದರ್ಶನದ ಗುರುತು ಪತ್ರವನ್ನು ಇಲಾಖೆಯ ಅಂತರ್ಜಾಲ ತಾಣ : ತಿತಿತಿ.ಚಿ.ಟಿಛಿ.ಟಿನಿಂದ ಡೌನ್ಲೋಡ್ ಮಾಡಿಕೊಂಡು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-222129, 222523ನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.