Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡಿಗರ ಮನಸ್ಸು ಒಂದಾಗದಿದ್ದರೆ...

ಕನ್ನಡಿಗರ ಮನಸ್ಸು ಒಂದಾಗದಿದ್ದರೆ ಏಕೀಕರಣದ ಉದ್ದೇಶ ಸಫಲವಾಗದು: ಎ.ಎನ್.ಮಹೇಶ್

ಕಸಾಪ: ಕರ್ನಾಟಕ ಏಕೀಕರಣ ವಜ್ರ ಮಹೋತ್ಸವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ18 Jun 2017 5:03 PM IST
share
ಕನ್ನಡಿಗರ ಮನಸ್ಸು ಒಂದಾಗದಿದ್ದರೆ ಏಕೀಕರಣದ ಉದ್ದೇಶ ಸಫಲವಾಗದು: ಎ.ಎನ್.ಮಹೇಶ್

ಚಿಕ್ಕಮಗಳೂರು, ಜೂ.18: ಆಂತರಿಕ ವೈರುಧ್ಯ ಮತ್ತು ಭೇದಭಾವಗಳನ್ನು ಬದಿಗೊತ್ತಿ ಕನ್ನಡಿಗರ ಮನಸ್ಸುಗಳು ಒಂದಾಗದಿದ್ದರೆ ಕರ್ನಾಟಕ ಏಕೀಕರಣದ ಉದ್ದೇಶ ಸಫಲವಾಗುವುದಿಲ್ಲ ಎಂದು ಅರಣ್ಯ ಮತ್ತು ವಸತಿ ವಿಹಾರಧಾಮಗಳ ನಿಗಮದ ಅಧ್ಯಕ್ಷ ಎ.ಎನ್.ಮಹೇಶ್ ಹೇಳಿದ್ದಾರೆ.

ಅವರು ತಾಲ್ಲೂಕು ಕಸಾಪ ನಗರ ಹೊರವಲಯದ ವಿರಕ್ತಮಠ ಬಸವಮಂದಿರದಲ್ಲಿ ಏರ್ಪಡಿಸಿದ್ದ ಕರ್ನಾಟಕ ಏಕೀಕರಣ ವಜ್ರ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ಏಕೀಕರಣದ ಹಿಂದೆ ನಾಡಿನ ಅನೇಕ ಹಿರಿಯರ ತ್ಯಾಗ ಮತ್ತು ಮಹತ್ವಾಕಾಂಕ್ಷೆ ಇದೆ. ಏಕೀಕರಣದ ಉದ್ದೇಶ ಹರಿದು ಹಂಚಿ ಹೋಗಿದ್ದ ನಾಡಿನ ಭಾಗಗಳನ್ನು ಮತ್ತು ಕನ್ನಡಿಗರನ್ನು ಒಗ್ಗೂಡಿಸಿ ಅವರೆಲ್ಲರೂ ಒಂದಾಗಿ ಬಾಳುವಂತೆ ಮಾಡುವುದಾಗಿತ್ತು ಎಂದರು.

ಆದರೆ ದುರದೃಷ್ಠವಶಾತ್ ನಾಡು ಏಕೀಕರಣಗೊಂಡು ಆರು ದಶಕಗಳಾದರೂ ಇನ್ನೂ ನಮ್ಮ ಹಿರಿಯರ ಕನಸು ನನಸಾಗಿಲ್ಲ, ಕನ್ನಡಿಗರ ಮನಸ್ಸುಗಳು ಒಂದಾಗಿಲ್ಲ. ಒಂದು ಪ್ರಾಂತ್ಯದವರಿಗೆ ಇನ್ನೊಂದು ಭಾಗದವರನ್ನು ಕಂಡರೆ ಆಗುವುದಿಲ್ಲ. ಏಕೀಕರಣದ ಉದ್ದೇಶ ಈಡೇರಬೇಕಾದರೆ ರಾಜ್ಯದ ಎಲ್ಲಾ ಭಾಗದವರೂ ನಾವೆಲ್ಲಾ ಒಂದೇ ಎಂದು ತಿಳಿಯಬೇಕು ಕನ್ನಡಿಗರೆಲ್ಲರ ಮನಸ್ಸುಗಳು ಒಂದಾಗಬೇಕು ಈ ವಿಷಯದಲ್ಲಿ ರಾಜಕಾರಣಿಗಳಿಗೂ ಇಚ್ಚಾಶಕ್ತಿ ಬೇಕು, ನಾಡಿನ ನೆಲ, ಜಲ, ಭಾಷೆ ವಿಷಯ ಬಂದಾಗ ಅವರೆಲ್ಲರೂ ಪಕ್ಷಾತೀತವಾಗಿ ಒಂದಾಗಬೇಕು ಎಂದು ಹೇಳಿದರು.

ಹಿರಿಯ ಪತ್ರಕರ್ತ ಈಶ್ವರ ದೈತೋಟ ಕರ್ನಾಟಕ ಏಕೀಕರಣ, ಮತ್ತು ಅದರ ಆಶೋತ್ತರಗಳು ವಿಷಯ ಕುರಿತು ಉಪನ್ಯಾಸ ನೀಡಿ, ದಕ್ಷಿಣ ಅಮೇರಿಕಾ ಸೇರಿದಂತೆ ಪ್ರಪಂಚದ ಅನೇಕ ರಾಷ್ಟ್ರಗಳಲ್ಲಿ ಇಂಗ್ಲೀಷ್ ಮಾತನಾಡುವುದಿಲ್ಲ. ಅಲ್ಲಿನ ಜನ ತಮ್ಮ ಮಾತೃಭಾಷೆಯಲ್ಲೇ ವ್ಯವಹರಿಸುತ್ತಾರೆ ಆದರೆ ಕನ್ನಡಿಗರು ಮಾತ್ರ ಕನ್ನಡದಲ್ಲಿ ಮಾತನಾಡಲು ನಾಚಿಕೊಳ್ಳುತ್ತಾರೆ, ಅನ್ಯಭಾಷೆಯವರೊಂದಿಗೆ ಮಾತನಾಡುವಾಗ ಅವರ ಭಾಷೆಯಲ್ಲೇ ಮಾತನಾಡುತ್ತಾರೆ ಎಂದು ವಿಷಾದಿಸಿದರು.

ಕನ್ನಡಿಗರಾದ ನಾವೇ ಕನ್ನಡದಲ್ಲಿ ಮಾತನಾಡಲು ನಾಚಿಕೆಪಡುವುದರಿಂದಾಗಿ ಬೇರೆ ರಾಜ್ಯಗಳಿಂದ ವಲಸೆ ಬಂದು ಇಲ್ಲಿ ನೆಲೆಸಿರುವವರು ಕನ್ನಡವನ್ನು ಕಲಿಯುತ್ತಿಲ್ಲ ಎಂದ ಅವರು ಈ ವಿಷಯದಲ್ಲಿ ಕನ್ನಡಿಗರು ಆತ್ಮಾವಲೋಕನ ಮಾಡಿಕೊಳ್ಳಬೇಕು, ಕನ್ನಡದಲ್ಲೇ ವ್ಯವಹರಿಸುವ ಪಣತೊಡಬೇಕು ಆಗ ಮಾತ್ರ ಏಕೀಕರಣಕ್ಕೆ ಅರ್ಥ ಬರುತ್ತದೆ ಎಂದರು.

ಆಶೀರ್ವಚನ ನೀಡಿದ ಶ್ರೀ ಜಯಬಸವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್, ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ಮಾತನಾಡಿದರು. ತಾಲ್ಲೂಕು ಕಸಾಪ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಗಾಯಕ ಮಲ್ಲಿಗೆ ಸುಧೀರ್ ಅವರಿಂದ ಕನ್ನಡದ ಗೀತೆಗಳ ಗಾಯನ ನಡೆಯಿತು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X