Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪರಭಾಷಿಕರು ಕನ್ನಡ ಕಟ್ಟುತ್ತಿದ್ದಾರೆ:...

ಪರಭಾಷಿಕರು ಕನ್ನಡ ಕಟ್ಟುತ್ತಿದ್ದಾರೆ: ಮಾಯಣ್ಣ

ವಾರ್ತಾಭಾರತಿವಾರ್ತಾಭಾರತಿ18 Jun 2017 9:18 PM IST
share

ಬೆಂಗಳೂರು, ಜೂ.18: ಕನ್ನಡವನ್ನು ಬೆಳೆಸಬೇಕಾದ ಕನ್ನಡಿಗರೇ ಕಾಲು ಎಳೆಯುತ್ತಿದ್ದಾರೆ. ಆದರೆ, ಪರಭಾಷಿಕರು ಕನ್ನಡವನ್ನು ಕಟ್ಟುತ್ತಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಮಾಯಣ್ಣ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಗರ ಜಿಲ್ಲಾ ಕಸಾಪದಿಂದ ಆಯೋಜಿಸಿದ್ದ ಕವಿಗೋಷ್ಠಿ ಹಾಗೂ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕನ್ನಡಿಗರ ಸಂಖ್ಯೆ ಕಡಿಮೆಯಾಗುತ್ತಿದೆ, ಕನ್ನಡ ಭಾಷೆ ನಾಶವಾಗುತ್ತಿದೆ ಎನ್ನುವುದು ಸತ್ಯಕ್ಕೆ ದೂರವಾದದ್ದು. ಕನ್ನಡವನ್ನು ಉಳಿಸಬೇಕಾದ ಕನ್ನಡಿಗರು, ಈಗಾಗಲೇ ಕನ್ನಡಕ್ಕಾಗಿ ಕೆಲಸ ಮಾಡುತ್ತಿರುವವರನ್ನು ಕಾಲೆಳೆಯುವ ಕೆಲಸ ಮಾಡುತ್ತಿರುವುದು ದುರದುಷ್ಟಕರ ಎಂದು ವಿಷಾಧಿಸಿದರು.

ಕನ್ನಡ ಕೆಲಸ ಮಾಡುವುದಕ್ಕಾಗಿ ಸಮ್ಮೇಳನ, ಸನ್ಮಾನ, ಪುಸ್ತಕ ಬಿಡುಗಡೆ ಕಾರ್ಯಕ್ರಮ ಮಾಡುವುದು ಸರಿಯಷ್ಟೇ. ಆದರೆ, ಇದೇ ವೇಳೆ ನಾಡಿನಲ್ಲಿ ಕನ್ನಡಕ್ಕಾಗಿ ಕೆಲಸ ಮಾಡುತ್ತಿರುವ ಕ್ರೀಯಾಶೀಲರನ್ನು ಗುರುತಿಸಿ, ಪ್ರೋತ್ಸಾಹಿಸುವುದರ ಮೂಲಕ ಕನ್ನಡ ಉಳಿಸಿ-ಬೆಳೆಸಲು ಸಹಕಾರಿಯಾಗಬೇಕು ಎಂದರು.

ನಗರದಲ್ಲಿ ಎಲ್ಲ ವಾರ್ಡ್ ಹಾಗೂ ವಿಧಾನಸಭಾ ಕ್ಷೇತ್ರದಲ್ಲಿ ಕನ್ನಡ ಕೆಲಸಕ್ಕಾಗಿ ವಿಶೇಷ ಕಾಳಜಿ ವಹಿಸಲಿದ್ದು, ಎಲ್ಲ ಹಂತದಲ್ಲಿಯೂ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಕನ್ನಡದ ಬಗ್ಗೆ ಪ್ರೀತಿ ತೋರಿಸುವ ಚಿಂದಿ ಆಯುವವರಿಂದ ಹಿಡಿದು, ಯಾವುದೇ ಜಾತಿ, ಧರ್ಮ ಭೇದವಿಲ್ಲದೆ ಎಲ್ಲರನ್ನೂ ಗುರುತಿಸಿ ಸನ್ಮಾನದ ಮೂಲಕ ಪ್ರೋತ್ಸಾಹಿಸಲಾಗುತ್ತದೆ ಎಂದು ನುಡಿದರು.


ಲೇಖಕಿ ಸುನಂದಾ ಪ್ರಭುರಾಜ್ ಮಾತನಾಡಿ, ತೃತೀಯ ಲಿಂಗಿಗಳನ್ನು ಸಮಾಜದಲ್ಲಿ ಅತ್ಯಂತ ಕೀಳಾಗಿ ಕಾಣುತ್ತಿದ್ದಾರೆ. ಅವರು ನಮ್ಮಂತೆ ಮನುಷ್ಯರು, ಅವರಿಗೂ ಬದುಕುವ ಹಕ್ಕಿದೆ ಎಂಬ ಮಾನವೀಯ ಗುಣಗಳು ಮರೆಯಾಗಿವೆ. ಇಂತಹ ಸಂದರ್ಭದಲ್ಲಿ ತೃತೀಯ ಲಿಂಗಿಗಳಿಗೆ ಸಮಾನವಾದ ಅವಕಾಶಗಳನ್ನು ಕಲ್ಪಿಸುವುದರ ಮೂಲಕ ಸಮಾಜದಲ್ಲಿ ಸಾಮಾನ್ಯ ಮನುಷ್ಯರಂತೆ ಬದಕಲು ಅವಕಾಶ ಕಲ್ಪಿಸಬೇಕು. ಇದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಕನ್ನಡ ಕಾರ್ಯಕರ್ತ ಶಂಕರ್ ಹೂಗಾರ್, ಆನೇಕಲ್ ಕಸಾಪ ಅಧ್ಯಕ್ಷ ರಾ.ನವೀನ್ ಕುಮಾರ್ ಉಪಸ್ಥಿತರಿದ್ದರು. ಇದೇ ವೇಳೆ ಟಿ.ಪಿಪ್ರಭುದೇವ್ ಮತ್ತು ಸುನಂದಾ ಹಾಗೂ ರಾಮಕೃಷ್ಣ ಮತ್ತು ಸರಸ್ವತಿ ದಂಪತಿಗಳಿಗೆ ‘ಆದರ್ಶ ದಂಪತಿ ಪ್ರಶಸ್ತಿ’, ಮೂರೂರು ಚಂದ್ರ, ಕೆ.ಚನ್ನಯ್ಯ, ಬಾಪುಗೌಡ ಮತ್ತು ಟಿ.ಎಸ್. ಚಂದ್ರಶೇಖರ್‌ರಾವ್‌ಗೆ ‘ಆದರ್ಶ ಕನ್ನಡಿಗ ಪ್ರಶಸ್ತಿ’, ಶಿವಪ್ರಕಾಶ ರು.ಕುಂಬಾರ ಗೆ ‘ಯುವಕಾವ್ಯ ಪ್ರತಿಭಾ ಪ್ರಶಸ್ತಿ’ ನೀಡಿ ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X