ಕಾರು ಢಿಕ್ಕಿ: ಸೈಕಲ್ ಸವಾರ ಮೃತ್ಯು
ಬ್ರಹ್ಮಾವರ, ಜೂ.18: ಸಾಬರಕಟ್ಟೆ ಬಳಿ ಜೂ.17ರಂದು ಸಂಜೆ 5.15ರ ಸುಮಾರಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಕೌಶಿಕ್ ಎಂದು ಗುರುತಿಸಲಾಗಿದೆ. ಸಾಬರಕಟ್ಟೆ ಕಡೆಯಿಂದ ಯಡ್ತಾಡಿ ಕಡೆಗೆ ಹೋಗುತ್ತಿದ್ದ ದೇವರಾಜ ಎಂಬವರು ಚಲಾಯಿಸುತ್ತಿದ್ದ ಮಾರುತಿ ಇಕೋ ಕಾರು, ಮುಂಭಾಗದಲ್ಲಿದ್ದ ಬೈಕ್‌ನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಎದುರಿನಲ್ಲಿದ್ದ ಕೌಶಿಕ್‌ರ ಸೈಕಲ್‌ಗೆ ಢಿಕ್ಕಿ ಹೊಡೆಯಿತು.
ಇದರಿಂದ ಸೈಕಲ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಕೌಶಿಕ್ ಮಣಿಪಾಲದ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





