Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೀವರಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಜೀವರಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ18 Jun 2017 10:44 PM IST
share

ಮಂಗಳೂರು, ಜೂ18: ಕರ್ನಾಟಕ ಸರಕಾರವು ನೂತನವಾಗಿ ಜಾರಿಗೊಳಿಸಿರುವ ಮುಖ್ಯಮಂತ್ರಿ ಸಾಂತ್ವನ ಹರೀಶ್ ಯೋಜನೆಯು ರಾಜ್ಯದ ವ್ಯಾಪ್ತಿಯಲ್ಲಿ ಘಟಿಸಿದ ರಸ್ತೆ ಅಪಘಾತದ ಯಾವುದೇ ಗಾಯಾಳುಗಳಿಗೆ 48 ಗಂಟೆಗಳವರೆಗೆ ಗರಿಷ್ಠ ರೂ. 25,000 ಗಳ ವರೆಗೆ ಉಚಿತ ತುರ್ತು ಚಿಕಿತ್ಸೆ ಒದಗಿಸಲಾಗುತ್ತದೆ.

ಈ ಯೋಜನೆಯು 2016 ಮಾ.8 ರಿಂದ ಜಾರಿಯಲ್ಲಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಮೂಲಕ ಅನುಷ್ಠಾನಗೊಳ್ಳುತ್ತಿದೆ.

2015ರ ರಸ್ತೆ ಅಪಘಾತದ ಸಮೀಕ್ಷೆಯು ತಿಳಿಸುವಂತೆ ಅಪಘಾತ ಹಾಗೂ ಸಾವುಗಳ ಸಂಖ್ಯೆಯಲ್ಲಿ ಕರ್ನಾಟಕ ರಾಜ್ಯವು ದೇಶದ 3ನೆ ರಾಜ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯಲ್ಲಿ ಮುಖ್ಯಮಂತ್ರಿ ಸಾಂತ್ವಾನ ಹರೀಶ್ ಯೋಜನೆಯನ್ನು ಜಾರಿಗೊಳಿಸಿದೆ. ಇದೊಂದು ಲೋಕೋಪಕಾರ ಯೋಜನೆಯಾಗಿದ್ದು, ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅತ್ಯಂತ ಮಹತ್ವದಾಗಿದೆ. ಅಪಘಾತದಂತಹ ಸಂಕಷ್ಟದ ಸಂದರ್ಭದಲ್ಲಿ ತಕ್ಷಣದ ಚಿಕಿತ್ಸೆ ಒದಗಿಸಲು ಹಾಗೂ ಜೀವ ಉಳಿಸಲು ನೆರವಾಗುವ ದಯಾಳುಗಳಿಗೆ ಸ್ಪಂದನೆ ನೀಡುವ ಪರೋಪಕಾರಿಗಳಿಗೆ ಜೀವ ರಕ್ಷಕ ಪ್ರಶಸ್ತಿ ನೀಡುವ ಮೂಲಕ ಅಂತಹ ಲೋಕೋಪಕಾರಿಗಳನ್ನು ಗೌರವಿಸುವುದು ಅತ್ಯಂತ ಸೂಕ್ತ ವಾಗಿದ್ದು, ಅದಕ್ಕಾಗಿ ಜೀವ ರಕ್ಷಕ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ.

ಈ ಪ್ರಶಸ್ತಿಯನ್ನು ಸ್ಥಾಪಿಸುವ ಬಹುಮುಖ್ಯ ಉದ್ದೇಶವೆಂದರೆ ಅಪಘಾತದ ಸಂದರ್ಭದಲ್ಲಿ ಸ್ಥಳದಲ್ಲಿ ಲಭ್ಯವಿರುವ ವ್ಯಕ್ತಿಗಳು ಯಾವುದೇ ವಿಳಂಬವಿಲ್ಲದೆ ಗಾಯಾಳುಗಳನ್ನು ರಕ್ಷಿಸಲು ತಕ್ಷಣವೇ ಆಸ್ಪತ್ರೆಗಳಿಗೆ ಸಾಗಿಸುವುದು ಹಾಗೂ ಚಿಕಿತ್ಸೆ ಕೊಡಿಸಲು ನೆರವಾಗುವುದು ಮುಂತಾದ ಕಾರ್ಯಗಳನ್ನು ನಿರ್ವಹಿಸುವಂತೆ ಪ್ರೋತ್ಸಾಹಿಸಿ ಈ ರೀತಿ ಸಹಾಯ ನೀಡಿದ ದಯಾಳುಗಳು ಅಥವಾ ಉಪಕಾರಿ ವ್ಯಕ್ತಿಗಳನ್ನು ಗುರುತಿಸಿ ಈ ಅತ್ಯುನ್ನತ ಮಟ್ಟದ ಜೀವರಕ್ಷಕ ಪ್ರಶಸ್ತಿಯನ್ನು ನೀಡಲಾಗುವುದು.

ಯಾವುದೇ ಬಹುಮಾನ ಅಥವಾ ಲಾಭದ ನಿರೀಕ್ಷೆಗಳಿಲ್ಲದೆ, ವಿಶೇಷ ಸಂಬಂಧಗಳಿಲ್ಲದೆ ಸ್ವಯಂ ಪ್ರೇರಿತರಾಗಿ ಬಂದು ಅಪಘಾತದ ಗಾಯಾಳುಗಳಿಗೆ ನೆರವಾಗುವ ಅಥವಾ ಸಹಾಯ ಮಾಡುವ ದಯಾಳು ಹಾಗೂ ಉಪಕಾರಿ ವ್ಯಕ್ತಿ ಈ ಪ್ರಶಸ್ತಿಗೆ ಅರ್ಹರಾಗಿದ್ದಾರೆ.

ಅರ್ಹತಾ ಮಾನದಂಡಗಳು:

ಕರ್ನಾಟಕ ವ್ಯಾಪ್ತಿಯೊಳಗಿನ ರಸ್ತೆ ಅಪಘಾತದ ಗಾಯಾಳುಗಳಿಗೆ ಸಹಾಯ ಮಾಡಲು ಶ್ರಮಿಸುವ ಯಾವುದೇ ವಯಸ್ಸಿನ ವ್ಯಕ್ತಿ/ಯಾವುದೇ ರಾಷ್ಟ್ರೀಯತೆಯ ವ್ಯಕ್ತಿ. ರಸ್ತೆ ಅಪಘಾತ ಗಾಯಾಳುಗಳಿಗೆ ನೆರವಾದ ಅಥವಾ ಜೀವ ಉಳಿಸಲು ಶ್ರಮಿಸಿದ ವ್ಯಕ್ತಿ ಪ್ರಶಸ್ತಿಗಾಗಿ ಸ್ವಯಂ ರೂಪದಲ್ಲಿ ಅಥವಾ ಸಾಕ್ಷಿಯಾದ ವ್ಯಕ್ತಿಯಿಂದ ನಾಮಕರಣಗೊಳ್ಳಬಹುದು.

ಜೀವರಕ್ಷಕ ಪ್ರಶಸ್ತಿಯ ಆಯ್ಕೆ ವಿಧಾನ:

ಎಲ್ಲ ನಾಮಕರಣ/ಅರ್ಜಿಗಳನ್ನು ಜಿಲ್ಲಾ ಜೀವರಕ್ಷಕ ಪ್ರಶಸ್ತಿ ಸಮಿತಿಯು ಪರಿಶೀಲಿಸಿ ಮಾರ್ಗಸೂಚಿಗಳ ಅನ್ವಯ ಮೌಲ್ಯಮಾಪನ ನಡೆಸಿ ವ್ಯಕ್ತಿಗಳು ನೀಡಿದ ಸಹಾಯ ಹಾಗೂ ಸದರಿ ಸಹಾಯದಿಂದ ಉಂಟಾದ ಉತ್ತಮ ಪರಿಣಾಮ ಮುಂತಾದವುಗಳನ್ನು ಆಧರಿಸಿ, ಪ್ರಶಸ್ತಿಗಳನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಎಂದು ವಿಭಾಗಿಸಿ ಘೋಷಿಸಲಾಗುತ್ತದೆ. ಪ್ರಶಸ್ತಿಗಳನ್ನು ಸಂಬಂಧಿಸಿದ ಜಿಲ್ಲೆಗಳಲ್ಲಿ ಪ್ರದಾನ ಮಾಡಲಾಗುವುದು.

ಪ್ರಶಸ್ತಿಯ ಆವರ್ತನ (ಅವಧಿ):

ಈ ಪ್ರಶಸ್ತಿಯನ್ನು ಒಂದು ವರ್ಷದಲ್ಲಿ 2 ಬಾರಿ ನೀಡಲಾಗುವುದು. ನಾಮಕರಣ/ಅರ್ಜಿಗಳನ್ನು ಜನವರಿಯಿಂದ ಜುಲೈವರೆಗೆ ಹಾಗೂ ಆಗಸ್ಟ್‌ನಿಂದ ಡಿಸೆಂಬರ್‌ವರೆಗೆ ಸ್ವೀಕರಿಸಲಾಗುವುದು. ಪ್ರಶಸ್ತಿಗಳನ್ನು ಪ್ರತೀ ವರ್ಷ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸಂದರ್ಭದಲ್ಲಿ ನೀಡಲಾಗುವುದು.

ಪ್ರಶಸ್ತಿಯ ಸ್ವರೂಪ:

ಉತ್ತಮ ಸೇವಾ ಕರ್ತರನ್ನು/ಉಪಕಾರಿಗಳನ್ನು ಗುರುತಿಸಲು ಹಾಗೂ ಪ್ರೋತ್ಸಾಹಿಸಲು ಜೀವರಕ್ಷಕ ಪ್ರಶಸ್ತಿಯು ಪ್ರಮಾಣ ಪತ್ರ ಹಾಗೂ ಫಲಕಗಳನ್ನು ಒಳಗೊಂಡಿದ್ದು ಇವುಗಳನ್ನು ಪ್ರದಾನ ಮಾಡಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೀವರಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲು ಉಪಕಾರಿ/ನಾಮಕರಣ ವ್ಯಕ್ತಿಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 3 ಕೊನೆಯ ದಿನ. ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಫಾರಂನ್ನು ಜಿಲ್ಲಾ ಸಂಯೋಜಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು (ದೂರವಾಣಿ ಸಂಖ್ಯೆ 7259003406) ಇವರಿಂದ ಪಡೆಯಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X