Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಾತಿವಾರು ಜನಗಣತಿ, ಆರ್ಥಿಕ ಸಮೀಕ್ಷೆ...

ಜಾತಿವಾರು ಜನಗಣತಿ, ಆರ್ಥಿಕ ಸಮೀಕ್ಷೆ ವರದಿಯನ್ನು ಬಹಿರಂಗಪಡಿಸಲು ಒತ್ತಾಯಿಸಿ ಹೋರಾಟ

ವಾರ್ತಾಭಾರತಿವಾರ್ತಾಭಾರತಿ19 Jun 2017 6:14 PM IST
share
ಜಾತಿವಾರು ಜನಗಣತಿ, ಆರ್ಥಿಕ ಸಮೀಕ್ಷೆ ವರದಿಯನ್ನು ಬಹಿರಂಗಪಡಿಸಲು ಒತ್ತಾಯಿಸಿ ಹೋರಾಟ

ದಾವಣಗೆರೆ, ಜೂ.19: ಜಾತಿವಾರು ಜನಗಣತಿ, ಆರ್ಥಿಕ ಸಮೀಕ್ಷೆ ವರದಿಯನ್ನು ಈ ಕೂಡಲೇ ಬಹಿರಂಗಪಡಿಸಬೇಕೆಂದು ಒತ್ತಾಯಿಸಿ ಹೋರಾಟ ಕ್ರಿಯಾ ಸಮಿತಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಾಣೆ ಮಾಡಿ, ನಂತರ ಜಾತಿ ಜನಗಣತಿ ಸಮೀಕ್ಷಾ ವರದಿಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಉಪವಿಭಾಗಾಧಿಕಾರಿ ಕಚೇರಿಗೆ ತಲುಪಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಮುಖಂಡ ಬಿ.ಎಂ. ಸತೀಶ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರವೂ ಸಾಮಾಜಿಕ ನ್ಯಾಯ ಎಂಬುದು ಮರೀಚಿಕೆಯಾಗಿದೆ. ಜಾತಿ ಮೂಲದ ಅನ್ಯಾಯಕ್ಕೆ ಒಳಗಾದ ಅಲಕ್ಷಿತ ಬಹು ಸಮುದಾಯಗಳು ಸಾಕಷ್ಟು ವಂಚನೆಗೆ ಒಳಗಾಗಿವೆ. 1931ರಲ್ಲಿ ಜಾತಿ ಜನಗಣತಿ ನಡೆದಿತ್ತು. ಅಂದಿನಿಂದ ಇಂದಿನವರೆಗೂ ನಡದೆ ಇಲ್ಲ. ಶೋಷಿತರ ಬಗ್ಗೆ ಕಳಕಳಿಯನ್ನು ವ್ಯಕ್ತಪಡಿಸುತ್ತಿರುವ ಸರ್ಕಾರ ಇದೇ ಮೊದಲ ಬಾರಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸಿದೆ. ಶೋಷಿತ ಜಾತಿಗಳಿಗೆ ಸಾಮಾಜಿಕ ನ್ಯಾಯ ಕೊಡಲು ಈ ವರದಿ ಅತ್ಯಂತ ಪೂರಕವಾಗಿದೆ ಎಂದು ಅವರು ತಿಳಿಸಿದರು.

ಈ ವರದಿ ಪೂರ್ಣಗೊಂಡು ಈಗಾಗಲೇ ಒಂದು ವರ್ಷ ಕಳೆಯಿತು. ಸರಕಾರ ವರದಿಯನ್ನು ಬಹಿರಂಗಗೊಳಿಸದೆ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದ ಅವರು, ಪ್ರಬಲ ಜಾತಿಗಳು, ಕೆಲವು ಮಠಾಧೀಶರು ಸೇರಿ ಈ ಕುರಿತು ಸರಕಾರಕ್ಕೆ ಬೆದರಿಕೆ ಹಾಕುತ್ತಿದ್ದಾರೆ. ಇದರಿಂದ ವರದಿ ಬಹಿರಂಗಕ್ಕೆ ವಿಳಂಬವಾಗುತ್ತಿದೆ. ಸರಕಾರ ಕೂಡಲೇ ವರದಿಯನ್ನು ಬಹಿರಂಗಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಅವರು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕೆಂಗೋ ಹನುಮಂತಪ್ಪ, ಎಂ.ಬಿ.ಹಾಲಪ್ಪ ಹದಡಿ, ರಘು ದೊಡ್ಡಮನಿ, ಗಣೇಶ ದಾಸ್‌ಕರಿಯಪ್ಪ, ಜೆ. ಅಮಾನುಲ್ಲಾಖಾನ್, ಅನಿಷ್ ಪಾಷಾ, ಹೂವಿನಮಡಿ ಚಂದ್ರಪ್ಪ, ಕೋಡಿಹಳ್ಳಿ ದುರ್ಗಪ್ಪ, ಡಿ. ಏಕಾಂತಪ್ಪ, ಎ. ಶ್ರೀನಿವಾಸ್, ಕೆ.ಜಿ. ಶಂಕರನಾಯಕ್, ಯರಬಳ್ಳಿ ಉಮಾಪತಿ, ರೇಣುಕಾ ಯಲ್ಲಮ್ಮ, ಪರುಶುರಾಮಪ್ಪ, ತಾ.ಪಂ. ಸದಸ್ಯ ಆಲೂರು ನಿಂಗರಾಜ್, ಬಸವರಾಜ ಗುಬ್ಬಿ, ಕೆ.ಎಸ್. ಬಸವರಾಜಪ್ಪ, ಜಿ.ಸಿ. ನಿಂಗಪ್ಪ, ಪಂಪಣ್ಣ, ನಲ್ಕುಂದ ಹಾಲೇಶ್, ಹೆಚ್. ಶಿವಪ್ಪ, ಷಣ್ಮುಖಚಾರ್, ಹೆಗ್ಗೆರೆ ರಂಗಪ್ಪ, ಐರಾಣಿ ಚಂದ್ರ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X