ರಾಜ್ಯ ಸಂಯೋಜಕರಾಗಿ ಸುರಯ್ಯ ಅಬ್ರಾರ್ ನೇಮಕ
ಮಡಿಕೇರಿ ಜೂ.19: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ರಾಜ್ಯ ಸಂಯೋಜಕರಾಗಿ ಮೂಡಾದ ಮಾಜಿ ಅಧ್ಯಕ್ಷರಾದ ಸುರಯ್ಯ ಅಬ್ರಾರ್ ನೇಮಕಗೊಂಡಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ವೈ.ಸಯ್ಯದ್ ಅಹಮ್ಮದ್ ಅವರು ಸುರಯ್ಯ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಪಸಂಖ್ಯಾತರ ಘಟಕದ ಬಲವರ್ಧನೆಯ ಮೂಲಕ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಶ್ರಮಿಸುವುದಾಗಿ ಸುರಯ್ಯ ಅಬ್ರಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story





